ನಗರದಲ್ಲಿ ಹೆಚ್ಚುತ್ತಿರುವ ಕೊಲೆ ಪ್ರಕರಣಗಳಿಂದ ನಾಗರಿಕರಲ್ಲಿ ಆತಂಕ - ಡಾ.ಬಾಬುರಾವ್ ಕಳವಳ
ಜಯ ಧ್ವಜ ನ್ಯೂಸ್ ರಾಯಚೂರು, ಮೇ.27- ನಗರದಲ್ಲಿ ಕೊಲೆ ಪ್ರಕರಣಗಳು ಹೆಚ್ಚುತ್ತಿರುವುದರಿಂದ ನಾಗರಿಕರಲ್ಲಿ ಆತಂಕ ಮನೆ ಮಾಡಿದೆ ಎಂದು ಭಾರತೀಯ ಜನತಾ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಹಾಗೂ ಸಮಾಜ ಸೇವಕ ಡಾ. ಬಾಬುರಾವ್ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯ ಸಂಪೂರ್ಣ ವಿಫಲತೆ ಎದ್ದು ಕಾಣುತ್ತಿದೆ ಎಂದು ಆರೋಪಿಸಿರುವ ಅವರು, ನಗರದಲ್ಲಿ ಗಾಂಜಾ ಮತ್ತಿತರರ ಮಾದಕ ವಸ್ತುಗಳ ಮಾರಾಟ ಹೆಗ್ಗಿಲ್ಲದೆ ನಡೆಯುತ್ತಿದ್ದು, ಗ್ಯಾಬ್ಲಿಂಗ್, ಜೂಜಾಟ ಎಲ್ಲೆಂದರಲ್ಲಿ ನಡೆಯುತ್ತಿವೆ. ಯುವಕರಿಗೆ ಕಾನೂನಿನ ಭಯ ಇಲ್ಲದಂತೆ ವರ್ತಿಸುತ್ತಿರುವುದು ಅಪಾಯಕಾರಿ ಬೆಳವಣಿಗೆ. ನಡು ರಸ್ತೆಯಲ್ಲಿಯೇ ಪೊಲೀಸರ ಭಯವಿಲ್ಲದೆ ಕೆಲ ಯುವಕರು ರಸ್ತೆಯಲ್ಲಿಯೇ ತೂರಾಡುತ್ತ ಮಹಿಳೆಯರು, ಯುವತಿಯರು ಇದ್ದಾರೆ ಎನ್ನುವ ಪರಿಜ್ಞಾನ ವಿಲ್ಲದೆ ಅನುಚಿತವಾಗಿ ವರ್ತಿಸುತ್ತಿರುವುದರಿಂದ ನಾಗರಿಕರು ಭಯಭೀತರಾಗಿದ್ದಾರೆ ಎಂದಿದ್ದಾರೆ.
ಪೊಲೀಸರು ಪೆಟ್ರೋಲಿಂಗ್ ಹೆಚ್ಚಿಸಬೇಕು ಮತ್ತು ಕಾನೂನು ಕೈಗೆ ತೆಗೆದುಕೊಳ್ಳುತ್ತಿರುವ ಪ್ರಕರಣಗಳನ್ನು ಹೆಚ್ಚಳವಾಗುತ್ತಿರುವುದರಿಂದ ಪೊಲೀಸರು ಅದನ್ನು ತಹಬದಿಗೆ ತರಲು ಏನು ಕ್ರಮ ಕೈಗೊಳ್ಳದಿರುವುದು ನಾಗರಿಕರಲ್ಲಿ ಆತಂಕ ಹೆಚ್ಚಲು ಕಾರಣವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಪೊಲೀಸ್ ಇಲಾಖೆಯ ಪ್ರಗತಿಪರಿಶೀಲನೆ ಸಭೆ ನಡೆಸಿ ನಗರದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸುವಂತೆ ನೋಡಿಕೊಳ್ಳಲು ಸೂಚಿಸಬೇಕೆಂದು ಅವರು ಆಗ್ರಹಿಸಿದ್ದಾರೆ.
Comments
Post a Comment