ನಾಳೆ ಯರಗೇರಿಗೆ  ಸಿಎಂ, ಡಿಸಿಎಂ, ರಾಜ್ಯಸಭೆ ವಿರೋಧ ಪಕ್ಷದ ನಾಯಕರು ಸೇರಿದಂತೆ ಸಚಿವರ ದಂಡು: 
         ವೇದಿಕೆ ಸೇರಿದಂತೆ ಸಕಲ ಸಿದ್ದತೆ ಪೂರ್ಣ ; 40 ಸಾವಿರ ಜನ ಸೇರುವ ನಿರೀಕ್ಷೆ - ದದ್ದಲ್
                                                                                                      ಜಯ ಧ್ವಜ ನ್ಯೂಸ್, ರಾಯಚೂರು,ಜೂ.22- ನಾಳೆ ತಾಲೂಕಿನ ಯರಗೇರಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸಚಿವರ ದಂಡು ಆಗಮಿಸಲಿದೆ ಎಂದು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಬಸನಗೌಡ ದದ್ದಲ್ ಹೇಳಿದರು. ಅವರಿಂದು ಯರಗೇರಿ ರಂಗನಾಥ ಸ್ವಾಮಿ ದೇವಸ್ಥಾನ ಬಳಿ ಕಾರ್ಯಕ್ರಮ ವೇದಿಕೆ ಹಾಗೂ ಸಕಲ ಸಿದ್ಧತೆ ವೀಕ್ಷಿಸಿ ನಂತರ  ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಜಿಲ್ಲಾಡಳಿತ, ಜಿ.ಪಂ ,ವಿವಿಧ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ  ಸುಮಾರು 936 ಕೋಟಿ ರೂ. ವೆಚ್ಚದ ಕಾಮಗಾರಿಗಳ ಶಂಕು ಸ್ಥಾಪನೆ, ಉದ್ಘಾಟನೆ ಹಾಗೂ ಬುಡಕಟ್ಟು ಉತ್ಸವ ಮತ್ತು ಮಹರ್ಷಿ ವಾಲ್ಮೀಕಿ ವಿವಿ ನಾಮಫಲಕ ಅನಾವರಣ , 371(ಜೆ) ದಶಮಾನೋತ್ಸವ ಕಾರ್ಯಕ್ರಮ ಬೆಳಿಗ್ಗೆ 11 ಕ್ಕೆ ನಡೆಯಲಿದ್ದು ಕಾರ್ಯಕ್ರಮದಲ್ಲಿ ಸುಮಾರು 40 ಸಾವಿರ ಜನ ಸೇರುವ ನಿರೀಕ್ಷೆ ಹೊಂದಲಾಗಿದೆ ಎಂದರು.

ಇದೆ ವೇಳೆ ಸುಮಾರು 100 ಫಲಾನುಭವಿಗಳಿಗೆ ಟ್ರಾಕ್ಟರ್, ಕಾರು,ಇನ್ನಿತರ ವಾಹನಗಳು ನೀಡಲಾಗುತ್ತಿದ್ದು ಬುಡಕಟ್ಟು ಉತ್ಸವ ಅಂಗವಾಗಿ ಕರಕುಶಲ ಕೈ ಮಗ್ಗ ಪ್ರದರ್ಶನ ಸೇರಿದಂತೆ ಸುಮಾರು 50  ಮಳಿಗೆ ಸ್ಥಾಪಿಸಲಾಗುತ್ತಿದೆ ಎಂದರು . ಕಾರ್ಯಕ್ರಮದಲ್ಲಿ ಗೃಹ ಸಚಿವ ಪರಮೇಶ್ವರ್, ಇಂಧನ ಸಚಿವ ಕೆ.ಜೆ.ಜಾರ್ಜ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹಾದೇವಪ್ಪ, ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ,ಸಹಕಾರ ಸಚಿವ ರಾಜಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ,ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪೂರು ಸೇರಿದಂತೆ ವಿವಿಧ ಇಲಾಖೆಗಳ ‌ಸಚಿವರು ಆಗಮಿಸಲಿದ್ದಾರೆ ಎಂದರು.

ಸಿಎಂ ಸಿದ್ದರಾಮಯ್ಯಗೆ ಈ ಭಾಗದ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗುತ್ತದೆ ಎಂದ ಅವರು ಗ್ರಾಮೀಣ ವಿಧಾನಸಭಾ ಕ್ಷೇತ್ರ ದೊಡ್ಡ ಕ್ಷೇತ್ರವಾಗಿದ್ದು  ದೇವಸ್ಗೂರು ಮತ್ತು ಯರಗೇರಿ ಅಥವಾ ಗಿಲೆಸ್ಗೂರು ತಾಲೂಕು ರಚನೆಗೆ ಮನವಿ ಮಾಡಲಾಗಿದ್ದು ಮತ್ತೊಮ್ಮೆ ಕೋರಲಾಗುತ್ತದೆ ಎಂದರು. ಈ ಭಾಗದಲ್ಲಿ ಶಿಕ್ಷಕರ ಕೊರತೆ ನಿವಾರಣೆಗೆ ಸಿಎಂ ಗಮನಕ್ಕೆ ತರಲಾಗುತ್ತದೆ ಎಂದರು. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ತುರ್ತು ಚಿಕೆತ್ಸೆ ವಾಹನ ಹಾಗೂ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗುತ್ತಿದ್ದು ಸಂಚಾರ ದಟ್ಟಣೆ ಆಗದಂತೆ ಮತ್ತು ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಸಂಸದ ಜಿ.ಕುಮಾರ ನಾಯಕ, ಶಾಸಕ ಹಂಪನಗೌಡ ಬಾದರ್ಲಿ, ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಪಾಟೀಲ ಇಟಗಿ,ಆರ್ ಡಿ ಎ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ಜಯವಂತರಾವ್ ಪತಂಗೆ, ರಜಾಕ್ ಉಸ್ತಾದ್, ಅಸ್ಲಾಂ ಪಾಷಾ, ಅಬ್ದುಲ್ ಕರೀಂ , ಸುಧೀಂದ್ರ ಜಾಗೀರದಾರ್ ಸೇರಿದಂತೆ ಅನೇಕರಿದ್ದರು.


Comments

Popular posts from this blog