ಪ್ರಹ್ಲಾದ್ ಜೋಷಿಗೆ ನಮ್ಮ ಸರ್ಕಾರದ ಬಗ್ಗೆ ಟೀಕಿಸುವ ನೈತಿಕತೆಯಿಲ್ಲ-ಸಿದ್ಧರಾಮಯ್ಯ. ಜಯ ಧ್ವಜ ನ್ಯೂಸ್, ರಾಯಚೂರು,ಜೂ.23- ಪ್ರಹ್ಲಾದ್ ಜೋಷಿಗೆ ಕಾಂಗ್ರೆಸ್ ಸರ್ಕಾರದ ಬಗ್ಗೆ ಟೀಕಿಸುವ ನೈತಿಕತೆ ಇಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರಿಂದು ತಾಲೂಕಿನ ಯರಗೇರಿ ಬಳಿಯ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾಲಯದ ಹೆಲಿಪ್ಯಾಡ್ ನಲ್ಲಿ ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ ಜಿಲ್ಲೆಗೆ ಏಮ್ಸ್ ನೀಡುವ ಬಗ್ಗೆ ತಜ್ಞರು ಸಮಿತಿ ನಿರ್ಧರಿಸುತ್ತದೆ ಎಂಬ ಜೋಷಿ ಹೇಳಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ ಜೋಷಿಯವರಿಗೆ ಯಾವ ನೈತಿಕತೆಯಿಲ್ಲ ಅವರಿಗೆ ರಾಜ್ಯದ ಬಗ್ಗೆ ಕಾಳಜಿಯಿಲ್ಲ ಕೇಂದ್ರದಿಂದ ಬರಬೇಕಾದ ಅನುದಾನ ಕಡಿತದ ಬಗ್ಗೆ ಅವರು ಎಂದಾದರು ಮೋದಿಯವರನ್ನು ಕೇಳಿದ್ದಾರೆ ಎಂದು ಪ್ರಶ್ನಿಸಿದರು.
ಸರ್ಕಾರದಲ್ಲಿ ಆಡಳಿತ ಯಂತ್ರ ಕುಸಿದಿದೆ ವರ್ಷ ಕಳೆದರೂ ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಅನುದಾನ ಸಿಕ್ಕಿಲ್ಲವೆಂದು ಸ್ವಪಕ್ಷದ ಶಾಸಕ ರಾಜು ಕಾಗೆ ಹೇಳಿಕೆಗೆ ಉತ್ತರಿಸಿದ ಅವರು ಅವರನ್ನು ಕರೆಸಿ ಮಾತನಾಡುತ್ತೇನೆ ಎಂದರು. ಬಿ.ಆರ್. ಪಾಟೀಲ್ ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಬಗ್ಗೆ ದೂರವಾಣಿ ಸಂಭಾಷಣೆ ಬಗ್ಗೆ ಪ್ರತಿಕ್ರಿಯಿಸಿ ಈ ಬಗ್ಗೆ ಚರ್ಚಿಸಿ ಅವರ ಸಮಸ್ಯೆ ನಿವಾರಿಸುವುದಾಗಿ ಹೇಳಿದರು. ತಾವು ದೆಹಲಿಗೆ ತೆರಳುತ್ತಿರುವ ಬಗ್ಗೆ ಮಾತನಾಡಿ ರಾಷ್ಟ್ರಪತಿಗಳು, ಪ್ರಧಾನಮಂತ್ರಿಗಳ ಹಾಗೂ ಹಣಕಾಸು ಮಂತ್ರಿಗಳ ಭೇಟಿಗೆ ಸಮಯ ನಿಗದಿಯಾಗಿದೆ ಎಂದರು.
Comments
Post a Comment