ಶಾಸಕ ಬಸನಗೌಡ ದದ್ದಲ್ ರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ
ಜಯ ಧ್ವಜ ನ್ಯೂಸ್ ,ರಾಯಚೂರು ಆ .2 - ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು ಇಂದು ರಾಯಚೂರ ಗ್ರಾಮೀಣ ಭಾಗದಲ್ಲಿ ಪ್ರವಾಸ ಕೈಗೊಂಡರು.
ರಾಯಚೂರು ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಮನ್ಸಲಾಪೂರ, ಚಿಕ್ಕಸೂಗೂರು ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.
ಮನ್ಸಲಾಪೂರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೈಕ್ರೋ ಯೋಜನೆಯಡಿ ನಿರ್ಮಿಸಲು ಉದ್ದೇಶಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.
ಅದೇ ರೀತಿ ಮುಜರಾಯಿ ಇಲಾಖೆಯ ಅನುದಾನದಡಿ ಶ್ರೀ ಬೀರಪ್ಪ ಗುಡಿ, ಶ್ರೀ ಸಿದ್ದಲಿಂಗೇಶ್ವರ ಗುಡಿ ಮತ್ತು ಶ್ರೀ ಹುಲಿಗಮ್ಮ ಗುಡಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಜೊತೆಗೆ ಮನ್ಸಲಾಪೂರು ಗ್ರಾಮ ಪಂಚಾಯತಿಯ ನೂತನ ಕಟ್ಟಡವನ್ನು ಲೋಕಾರ್ಪಣೆ ಮಾಡಿದರು.
ಚಿಕ್ಕಸೂಗೂರು ಗ್ರಾಮಕ್ಕೆ ತೆರಳಿದ ಶಾಸಕರು, ಶ್ರೀ ಆಂಜನೇಯ ಸ್ವಾಮಿ ಗುಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಜೊತೆಗೆ ವಿಶೇಷ ಅನುದಾನದಲ್ಲಿ ಹಜರತ್ ಬಾಬಾ ಫಕ್ರುದ್ದೀನ್ ದರ್ಗಾ ಕಾಮಗಾರಿ ಭೂಮಿ ಪೂಜೆ ಸಹ ನೆರವೇರಿಸಿದರು. ಸ್ವಂತ ಸಂಪನ್ಮೂಲ ಅನುದಾನದಡಿ ವಿವಿಧ ಕಾಮಗಾರಿಗಳಿಗೆ ಶಾಸಕರು ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂಧರ್ಭದಲ್ಲಿ ದೇವಸೂಗುರ ಬ್ಲಾಕ್ ಅಧ್ಯಕ್ಷರು,ತಾಲೂಕಾ ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷರು, ಮನ್ಸಲಾಪೂರು, ಚಿಕ್ಕಸೂಗೂರು ಸೇರಿದಂತೆ ಸುತ್ತಲಿನ ಗ್ರಾಮಗಳ ಹಿರಿಯ ಮುಖಂಡರು, ನಾಮ ನಿರ್ದೇಶಿತ ಸದಸ್ಯರು, ಅಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.
Comments
Post a Comment