ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ನೌಕರರ ಪ್ರತಿಭಟನೆ
ಜಯ ಧ್ವಜ ನ್ಯೂಸ್ , ರಾಯಚೂರು, ಆ.21- ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ನೌಕರರುಅಂಗನವಾಡಿ ಕಪ್ಪು ದಿನ ಪ್ರತಿಭಟನೆ ನಡೆಸಿದರು. ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾ ಶಿಶು ಅಭಿವೃದ್ಧಿ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು . ಭಾರತದಲ್ಲಿ ಮಾನವ ಅಭಿವೃದ್ಧಿ ಸೂಚ್ಯಾಂಕಕ್ಕಿರುವ ಏಕೈಕ ಯೋಜನೆ ಐಸಿಡಿಎಸ್ ಮಾತ್ರ. ಈ ಯೋಜನೆಗೆ ಇಂದು ೫೦ ವರ್ಷಗಳಾಗುತ್ತಾ ಬರುತ್ತಿದೆ. ಈ ಯೋಜನೆಯನ್ನು ಸರಳೀಕರಿಸಿ ಫಲಾನುಭವಿಗಳನ್ನು ಆಕರ್ಷಿಸಲು ಸರ್ಕಾರಗಳು ಕ್ರಮಗಳನ್ನು ರೂಪಿಸಬೇಕಿತ್ತು. ಆದರೆ ಅದರ ಬದಲಾಗಿ ಸಂಕೀರ್ಣಗೊಳಿಸಲಾಗುತ್ತಿದೆ. ಯಾವುದೇ ಸೌಲಭ್ಯಗಳನ್ನು ಕೊಡದೇ ಮುಖಚರ್ಯೆ ಗುರ್ತಿಸುವ ಕ್ರಮ (ಈಖS) ನ್ನು ಅಳವಡಿಸಿದ್ದರಿಂದ ಕ್ಷೇತ್ರಮಟ್ಟದಲ್ಲಿ ಹಲವಾರು ತೊಂದರೆಗಳನ್ನು ಅನುಭವಿಸುವಂತಾಗಿದೆ.೨೦೧೩ ರ ಆಹಾರ ಭದ್ರತಾ ಕಾಯ್ದೆಯ ಆಶಯವೇನೆಂದರೆ ಯಾವುದೇ ಫಲಾನುಭವಿ ಹಸಿವಿನಿಂದ ನರಳಬಾರದು ಮತ್ತು ಸುಪ್ರಿಂ ಕೋರ್ಟ್ ನಿರ್ದೇಶನದ ಆಶಯವೇನೆಂದರೆ, ಆಧಾರ ಕಾರ್ಡ್ ಇಲ್ಲ ಎಂಬ ನೆಪದಲ್ಲಿ ಸಬ್ಸಿಡಿ ಹಾಗೂ ಉಚಿತವಾಗಿ ಸಿಗುವ ಸೌಲಭ್ಯಗಳಿಂದ ಫಲಾನುಭವಿಗಳಿಗೆ ವಂಚನೆಯಾಗಬಾರದು. ಈ ಆಶಯಗಳನ್ನು ಸಂರಕ್ಷಣೆ ಮಾಡಬೇಕಾದ ಸರ್ಕಾರಗಳು ಇಂದು ಕಡ್ಡಾಯಗೊಳಿಸುವ ಮುಖಾಂತರ ಫಲಾನುಭವಿಗಳ ಹಕ್ಕನ್ನು ನಿರಾಕರಿಸುತ್ತಿವೆ.
ಮುಖಾಂತರ ಸಂಗ್ರಹಿಸುವ ಫಲಾನುಭವಿಗಳ ವೈಯಕ್ತಿಕ ಮಾಹಿತಿ ಸೋರಿಕೆಯಾಗುತ್ತದೆ. ವಿಪರೀತ ಸೈಬರ್ ವಂಚನೆಗಳು ಹೆಚ್ಚುತ್ತಿರುವುದು ತಮಗೆ ತಿಳಿದಿದೆ.
೬೦% ತನ್ನ ಪಾಲಿನ ವಂತಿಗೆಯನ್ನು ನೀಡಬೇಕಾದ ಕೇಂದ್ರ ಸರ್ಕಾರ ಈಖS ನಂತಹ ನಿರ್ಬಂಧಗಳನ್ನು ಹಾಕುವ ಮುಖಾಂತರ ತನ್ನ ಪಾಲಿನ ಹಣ ಕಡಿಮೆ ಮಾಡಲು ಮುಂದಾಗಿದೆ.
ಚಟುವಾಟಿಕೆ ಆಧಾರದಲ್ಲಿ ಹಣ ಬಿಡುಗಡೆ ಮಾಡುವ ವಿಧಾನಗಳು ಮತ್ತು ಭಾರತದಲ್ಲಿ ಐಸಿಡಿಎಸ್ ಫಲಾನುಭವಿಗಳನ್ನು ಕಡಿಮೆ ತೋರಿಸಿ ಹಣ ಕಡಿತ ಮಾಡುವ ಯೋಜನೆ ಇದಾಗಿದೆ.
ಈಗಾಗಲೇ ಮಾನವ ಅಭಿವೃದ್ಧಿ ಸೂಚ್ಯಾಂಕದಲ್ಲಿ ೧೩೫ ನೇ ಸ್ಥಾನದಲ್ಲಿರುವ ಭಾರತ ಇದರಿಂದ ಮತ್ತಷ್ಟು ಕಳೆಗುಂದುತ್ತಿದೆ.
ರದ್ದು ಮಾಡಿ ಐಸಿಡಿಎಸ್ ಯೋಜನೆಯನ್ನು ಖಾಯಂ ಮಾಡಬೇಕು, ಗುಜರಾತ್ ಹೈಕೋರ್ಟ್ ತೀರ್ಪಿನಂತೆ ‘ಸಿ’ ಮತ್ತು ‘ಡಿ’ ಗುಂಪಿನ ನೌಕರರೆಂದು ಪರಿಗಣಿಸಬೇಕು, ೨೦೧೮ ರಿಂದ ಅನ್ವಯವಾಗುವಂತೆ ವೇತನ ಹೆಚ್ಚಿಸಿ, ಫಲಾನುಭವಿಗಳ ಘಟಕ ವೆಚ್ಚ ಹೆಚ್ಚಿಸಬೇಕು ಎಂದು ಒತ್ತಾಯಿಸಿ ಇಂದು ಆಗಸ್ಟ್ ೨೧, ೨೦೨೫ ರಂದು ರಾಯಚೂರು ಜಿಲ್ಲಾದ್ಯಾಂತ ಎಲ್ಲಾ ತಾಲೂಕ ಕೇಂದ್ರಗಳಲ್ಲಿ ಮತ್ತು ರಾಯಚೂರು ಜಿಲ್ಲಾ ಕೇಂದ್ರ ನಗರದ ಟಿಪ್ಪು ಸುಲ್ತಾನ ಗಾರ್ಡನ್‌ನಲ್ಲಿ ಕಪ್ಪುಪಟ್ಟಿ ಧರಿಸುವ ಮುಖಾಂತರ ಕಪ್ಪುದಿನವನ್ನು ಆಚರಿಸಿ ಪ್ರತಿಭಟನೆ ನಡೆಸಲಾಗಿದೆ.
ಈ ಮನವಿಗೆ ಸ್ಪಂದಿಸದಿದ್ದರೆ ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ಕೇಂದ್ರ ಸಚಿವರ ಮನೆಯ ಮುಂದೆ ಅನಿರ್ಧಿಷ್ಟ ಅವಧಿಯ ಹೋರಾಟ ರೂಪಿಸಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದರು. ಈ ಪ್ರತಿಭಟನೆಯಲ್ಲಿ ಹೆಚ್.ಪದ್ಮಾ, ನರ್ಮದಾ, ಗಂಗಮ್ಮ, ಮಮತಾ, ಶಾಂತ, ಪಾರ್ವತಿ ಶರಣಮ್ಮ, ಸಾವಿತ್ರಿ, ಸುರೇಖಾ, ಭ್ಯಾಗಮ್ಮ, ಗೋಕಾರಮ್ಮ,ಗೌರಮ್ಮಮರ್ಚೆಡ್, ಡಿ ಎಸ್.ಶರಣಬಸವ,ಕೆ.ಜಿ.ವಿರೇಶ, ರಹೀಮತಬೇಗಂ,ಸುನಿತಾ,ಉಮಾ.ಡಿ.ವೆಂಕಟಮ್ಮ, ಶಾರದಮ್ಮ, ಬಿ.ಇಂದಿರಾಸೇರಿದಂತೆ ನೌಕರರು ಭಾಗವಹಿಸಿದ್ದರು.
Comments
Post a Comment