ಕಲ್ಮಲಾದಲ್ಲಿ ರಸ್ತೆ ಬದಿಯಲ್ಲಿ ನವಜಾತ ಶಿಶು ಪತ್ತೆ
ಜಯ ಧ್ವಜ ನ್ಯೂಸ್ , ರಾಯಚೂರು,ಆ.19- ಆಗ ತಾನೆ ಜನಿಸಿದ ಗಂಡು ನವಜಾತ ಶಿಶುವನ್ನು ರಸ್ತೆ ಬದಿಯಲ್ಲಿ ಬಿಸಾಡಿದ್ದು, ದಾರಿಹೋಕರು ಶಿಶುವಿನ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಇಂದು ತಾಲ್ಲೂಕಿನ ಕಲ್ಮಲಾ ಗ್ರಾಮದ ಕಲ್ಲೂರು ರಸ್ತೆಯಲ್ಲಿ ನಡೆದಿದೆ.
ಮಗುವನ್ನು ರಸ್ತೆ ಬದಿಯಲ್ಲಿಯೇ ಹೆತ್ತವರು ಬಿಟ್ಟು ಹೋಗಿರುವ
ಸಂಶಯ ವ್ಯಕ್ತವಾಗಿದೆ. ಶಿಶುವನ್ನು ಕಲ್ಮಲಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಿ, ನಂತರ ರಾಯಚೂರಿನ ರಿಮ್ಸ್ ಆಸ್ಪತ್ರೆ ದಾಖಲಿಸಿದ್ದಾರೆ.
ಆಸ್ಪತ್ರೆಯಲ್ಲಿ ಶಿಶು ಆರೋಗ್ಯವಾಗಿದೆ ಎಂದು ತಿಳಿದುಬಂದಿದೆ. ಶಿಶುವಿನ ಹೆತ್ತವರ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯಚರಣೆ ನಡೆಸಿದ್ದಾರೆ.
Comments
Post a Comment