ಆ.24 ರಂದು ಛಲವಾದಿ ಮಹಾಸಭಾ ಮಹಿಳಾ ಘಟಕದಿಂದ ಪ್ರತಿಭಾ ಪುರಸ್ಕಾರ - ಅರ್ಚನಾ ಜಯ ಧ್ವಜ ನ್ಯೂಸ್, ರಾಯಚೂರು, ಆ.21- ಛಲವಾದಿ ಮಹಾಸಭಾ ಜಿಲ್ಲಾ ಘಟಕದಿಂದ ಆ.24ರಂದು ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿದೆ ಎಂದು ಛಲವಾದಿ ಮಹಾಸಭಾ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಅರ್ಚನಾ ತಾಯಪ್ಪ ಸುಂಕಾರಿ ಹೇಳಿದರು. ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಆ.24 ರಂದು ಬೆಳಿಗ್ಗೆ 10 ಕ್ಕೆ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮ ಉದ್ಘಾಟನೆಯನ್ನು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹಾದೇವಪ್ಪ ನೆರವೇರಿಸಲಿದ್ದು , ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಜ್ಯೋತಿ ಬೆಳಗಿಸಲಿದ್ದು .ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ರಾಜ್ಯ ಛಲವಾದಿ ಮಹಾಸಭಾದ ರಾಜ್ಯ ಅಧ್ಯಕ್ಷರಾದ ಸಿದ್ದಯ್ಯಾ ಹಾಗೂ ರಾಜ್ಯ ಛಲವಾದಿ ಮಹಾಸಭಾದ ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆ ಈರಮ್ಮ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿ ಲಲಿತಾ ಅರೋಲಿಕರ್ ನೆರವೇರಿಸಲಿದ್ದಾರೆ ಎಂದರು. ಅಧ್ಯಕ್ಷತೆಯನ್ನು ಜಿಲ್ಲಾ ಛಲವಾದಿ ಮಹಾಸಭಾ ಮಹಿಳಾ ಘಟಕದ ಅಧ್ಯಕ್ಷೆ ಅರ್ಚನಾ ತಾಯಪ್ಪ ಸುಂಕಾರಿ ವಹಿಸಲಿದ್ದು ಕಾರ್ಯಕ್ರಮದಲ್ಲಿ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಸೇರಿದಂತೆ ಗಣ್ಯರು, ಸಮಾಜ ಬಾಂಧವರು, ವೈದ್ಯರು ಇನ್ನಿತರರು ಪಾಲ್ಗೊಳ್ಳುತ್ತಿದ್ದು ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ.70ಕ್ಕೂ ಹೆಚ್ಚು ಅಂಕ ಪಡೆದ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ನಾಗರತ್ನ, ಪ್ರಿಯದರ್ಶಿನಿ, ಸುಜಾತಾ, ಸಾವಿತ್ರಿ ಇನ್ನಿತರರು ಇದ್ದರು.
Comments
Post a Comment