
ಶ್ರೀ ಚಂದ್ರಮೌಳೇಶ್ವರ ದೇವಸ್ಥಾನ ಅರ್ಚಕರಾದ ಶಿವಪುತ್ರಯ್ಯ ಸ್ವಾಮಿರವರಿಗೆ ಮಾತೃವಿಯೋಗ ಜಯ ಧ್ವಜ ನ್ಯೂಸ್ ,ರಾಯಚೂರು, ಅ.1- ನಗರದ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಶಿವಪುತ್ರಯ್ಯ ಸ್ವಾಮಿ ಅವರ ತಾಯಿ ಶತಾಯುಷಿ ಪಾರ್ವತಮ್ಮ (101) ಬುಧವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಮೃತರು ಆರು ಜನ ಪುತ್ರರು, ಓರ್ವ ಪುತ್ರಿ, ಮೊಮ್ಮಕ್ಕಳು, ಬಂಧು ಬಳಗ ಹಾಗೂ ಅಪಾರ ಶಿಷ್ಯ ಬಳಗವನ್ನು ಬಿಟ್ಟು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ನಾರಾಯಣಪೇಟೆ ಜಿಲ್ಲೆಯ ನೆರಡಗುಂಬ ಗ್ರಾಮದಲ್ಲಿ ಬುಧವಾರ ಸಂಜೆ 4 ಗಂಟೆಗೆ ನೆರವೇರಲಿದೆ ಎಂದು ಕುಟುಂಬ ಮೂಲ ಪ್ರಕಟಣೆಯಲ್ಲಿ ತಿಳಿಸಿದೆ.