ಸಾಹಿತಿ ಬಾಬು ಬಂಡಾರಿಗಲ್, ಪತ್ರಕರ್ತ ಶಿವಮೂರ್ತಿ ಹಿರೇಮಠ ಸೇರಿ 6 ಜನ ಸಾಧಕರಿಗೆ ಹಾಗೂ ಎರಡು  ಸಂಸ್ಥೆಗಳಿಗೆ ರಾಜ್ಯೋತ್ಸವ ವಿಶೇಷ ಸನ್ಮಾನ


ಜಯ ಧ್ವಜ ನ್ಯೂಸ್, ರಾಯಚೂರು ಅ.31- ರಾಯಚೂರು ಜಿಲ್ಲೆಯ ಹಿರಿಯ ಸಾಹಿತಿ ಬಾಬು ಬಂಡಾರಿಗಲ್, ಹಿರಿಯ ಪತ್ರಕರ್ತ ಶಿವಮೂರ್ತಿ ಹಿರೇಮಠ ಸೇರಿದಂತೆ 6 ಜನ ಗಣ್ಯರಿಗೆ ಹಾಗೂ ಎರಡು ಸಂಸ್ಥೆಗಳಿಗೆ ಕನ್ನಡ ನಾಡು-ನುಡಿಯ ಸೇವೆಗಾಗಿ ರಾಯಚೂರು ಜಿಲ್ಲಾಡಳಿತದಿಂದ ರಾಜ್ಯೋತ್ಸವದ ವಿಶೇಷ ಸನ್ಮಾನ ನಡೆಯಲಿದೆ. 

ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸಿದ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಕ್ಕಾಗಿ ಸಾಹಿತ್ಯ ಕ್ಷೇತ್ರದಲ್ಲಿ ಹಿರಿಯ ಸಾಹಿತಿ ಬಾಬು ಭಂಡಾರಿಗಲ್, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಿರಿಯ ಪತ್ರಕರ್ತ ಶಿವಮೂರ್ತಿ ಹಿರೇಮಠ, ವೈದ್ಯಕೀಯ ಕ್ಷೇತ್ರದಲ್ಲಿ ರಾಜೀವಗಾಂಧಿ ಸೂಪರ್ ಸ್ಪೆಷಾಲಿಟಿ ಓಪೆಕ್ ಆಸ್ಪತ್ರೆಯ ವಿಶೇಷಾಧಿಕಾರಿ ಡಾ.ರಮೇಶ ಸಿ ಸಾಗರ, ಸಮಾಜ ಸೇವೆ ಕ್ಷೇತ್ರದಲ್ಲಿ ಚಂದ್ರಶೇಖರ ಪಾಟೀಲ್ ಮಿರ್ಜಾಪೂರ, ಕಲಾ ಕ್ಷೇತ್ರದಲ್ಲಿ ಸಿಂಧನೂರು ತಾಲೂಕಿನ ಸುಕಾಲಪೇಟೆ ನಾರಾಯಣಪ್ಪ ಮಾಡಶಿರವಾರ, ಕೃಷಿ ಕ್ಷೇತ್ರದಲ್ಲಿ

ರಾಯಚೂರು ತಾಲೂಕಿನ ಪಲ್ಕಂದೊಡ್ಡಿ ಗ್ರಾಮದ ಹನುಮರೆಡ್ಡಿ ತಂದೆ ಬಸವರಾಜಪ್ಪ ಹಾಗೂ ಸೇವಾ ಕ್ಷೇತ್ರದಲ್ಲಿ ಸುರಕ್ಷಾ ಟ್ರಸ್ಟ್ ರಾಯಚೂರು ಹಾಗೂ ಕಲಾ ಸಂಕುಲ ಸಂಸ್ಥೆ ರಾಯಚೂರು ಅವರಿಗೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನವಂಬರ್ 01ರಂದು ನಡೆಯುವ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಸನ್ಮಾನಿಸಿ, ಗೌರವಿಸಿ ಪ್ರೋತ್ಸಾಹಿಸಲಾಗುತ್ತದೆ ಎಂದು ಕನ್ನಡ ರಾಜೋತ್ಸವ ಆಚರಣೆ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments

Popular posts from this blog