ಪತ್ರಕರ್ತರ  ಸಂಘದ ಚುನಾವಣೆಯ ಜಿಲ್ಲಾ ಚುನಾವಣಾಧಿಕಾರಿಯಾಗಿ ಮಲ್ಲಣ್ಣ ನೇಮಕ

ಜಯ ಧ್ವಜ ನ್ಯೂಸ್,   ರಾಯಚೂರು ,ಅ.10- ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025-2028 ನೇ ಸಾಲಿನ ರಾಯಚೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯ ಜಿಲ್ಲಾ ಚುನಾವಣಾಧಿಕಾರಿಯಾಗಿ  ನಿವೃತ್ತ ಉಪ ತಹಸೀಲ್ದಾರ್ ಮಲ್ಲಣ್ಣ ಅವರನ್ನು ನೇಮಕ ಮಾಡಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಎನ್ ರವಿಕುಮಾರ್ ಆದೇಶ ಹೊರಡಿಸಿದ್ದಾರೆ.
ಚುನಾವಣೆ ನಿಯಮನಗಳನ್ವಯ ಮತ್ತು ಸಂಘದ ಬೈಲಾ ಪ್ರಕಾರ ಚುನಾವಣೆ ನಡೆಸಿಕೊಡಲು ಸೂಚಿಸಲಾಗಿದೆ. ಚುನಾವಣೆ ಪ್ರಕ್ರಿಯೆ ಸಂದರ್ಭದಲ್ಲಿ ಬೈಲಾ ನಿಯಮಗಳ ಸಂಬoಧ ಹೆಚ್ಚಿನ ಮಾಹಿತಿ ಅಗತ್ಯ ಬಿದ್ದರೆ ರಾಜ್ಯ ಚುನಾವಣಾಧಿಕಾರಿಯವರನ್ನು ಸಂಪರ್ಕಿಸಿ ಎಂದು ಆದೇಶ ಪತ್ರದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಎನ್ ರವಿಕುಮಾರ್ ತಿಳಿಸಿದ್ದಾರೆ.
ಮಲ್ಲಣ್ಣ ಅವರು ಜಿಲ್ಲಾ ಚುನಾವಣಾಧಿಕಾರಿಯಾಗಿ ಸತತ ಎರಡನೇ ಭಾರಿಗೆ ನೇಮಕವಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Comments

Popular posts from this blog