ಕುರ್ಡಿ ಗ್ರಾಮದಲ್ಲಿ ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಅನುಕೂಲ ಕಲ್ಪಿಸಲು ವಸಂತಕುಮಾರ್ ಗೆ ಫಲಾನುಭವಿಗಳು ಮನವಿ. ಜಯ ಧ್ವಜ ನ್ಯೂಸ್ , ರಾಯಚೂರು, ಅ.18- ಇಂದು ವಿಧಾನ ಪರಿಷತ್ ಸದಸ್ಯ ಎ.ವಸಂತ ಕುಮಾರ ಅವರನ್ನು ಮಾನವಿ ತಾಲ್ಲೂಕಿನ ಕುರ್ಡಿ ಗ್ರಾಮದ ನಿವಾಸಿಗಳು ಭೇಟಿಯಾಗಿ ಸಾಗುವಳಿ ಜಮೀನಿನ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದರು.
ಕುರ್ಡಿ ಗ್ರಾಮದಲ್ಲಿ ಹತ್ತಾರು ವರ್ಷಗಳಿಂದ ಸರಕಾರಿ ಜಮೀನು ಸಾಗುವಳಿ ಮಾಡುತ್ತ ಬಂದಂತಹ ಹತ್ತಾರು ಕುಟುಂಬಗಳನ್ನು ಇತ್ತೀಚಿಗೆ ಕೆಲವು ಪಟ್ಟಭದ್ರ ಹಿತಾಸಕ್ತ ವ್ಯಕ್ತಿಗಳು ತಡೆದಿರುವದರಿಂದ ಬಡ ಗ್ರಾಮಸ್ಥರಿಗೆ ತೊಂದರೆಯಾಗಿರುವ ಬಗ್ಗೆ ಗ್ರಾಮಸ್ಥರು ಎ.ವಸಂತಕುಮಾರ ಅವರಿಗೆ ಭೇಟಿಯಾಗಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಮಾತನಾಡಿದ ಎ.ವಸಂತಕುಮಾರ ಅವರು ಗ್ರಾಮಸ್ಥರ ಸಮಕ್ಷಮದಲ್ಲಿ ಪಂಚನಾಮೆ ಮಾಡಿ ನೈಜ ಫಲಾನುಭವಿಗಳಿಗೆ ಸಾಗುವಳಿ ಮಾಡಲು ಅನುಕೂಲ ಮಾಡಿಕೊಡಬೇಕೆಂದು ಸೂಚಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಮಹಿಳೆಯರು, ಕುಟುಂಭಸ್ಥರು, ಫಲಾನುಭವಿಗಳು ಹಾಜರಿದ್ದರು.
Comments
Post a Comment