ಮಾವಿನಕೆರೆ ಉದ್ಯಾನವನದಲ್ಲಿ ಕಾಮಗಾರಿ: ತಾತ್ಕಾಲಿಕವಾಗಿ ಮೂರು ತಿಂಗಳು ಸಾರ್ವಜನಿಕ ಪ್ರವೇಶ ನಿರ್ಬಂಧ


ಜಯ ಧ್ವಜ ನ್ಯೂಸ್ , ರಾಯಚೂರು ನ. 28 - ನಗರದ ಮಹಾನಗರ ಪಾಲಿಕೆ ವ್ಯಾಪ್ತಿಯ ಮಾವಿನಕೆರೆ ಉದ್ಯಾನವನದಲ್ಲಿ ವಿವಿಧ ಅಭಿವೃದ್ಧಿ ಹಾಗೂ ಸೌಂದರ್ಯವರ್ಧಕ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿರುವ ಹಿನ್ನೆಲೆ, ಉದ್ಯಾನವನ್ನು ತಾತ್ಕಾಲಿಕವಾಗಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಲು ತೀರ್ಮಾನಿಸಿದೆ.

ಸದರಿ ಉದ್ಯಾನವನದಲ್ಲಿ ರಸ್ತೆ ನಿರ್ಮಾಣ, ಕಾಲುದಾರಿ ಇಂಟರ್‌ಲಾಕಿಂಗ್, ಬೇಲಿ ಕಾಮಗಾರಿಗಳು, ಅಲಂಕಾರಿಕ ವಿದ್ಯುತ್ ಕಂಬಗಳ ಸ್ಥಾಪನೆ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳು ಮುಂದಿನ ದಿನಗಳಲ್ಲಿ ನಡೆಯಲಿವೆ. ಈ ಹಿನ್ನೆಲೆಯಲ್ಲಿ ನವೆಂಬರ್ 29 ರಿಂದ ಮುಂದಿನ ಮೂರು ತಿಂಗಳುಗಳ ಕಾಲ ಮಾವಿನಕೆರೆಯ ಕಾಮಗಾರಿಗಳನ್ನು ಸುರಕ್ಷಿತವಾಗಿ ಮತ್ತು ತಾಂತ್ರಿಕವಾಗಿ ನೆರವೇರಿಸಲು ಸಾರ್ವಜನಿಕರ ಪ್ರವೇಶವನ್ನು ನಿಯಂತ್ರಿಸುವುದು ಅಗತ್ಯವಿದ್ದು, ಮಾವಿನಕೆರೆ ಪಬ್ಲಿಕ್ ಗಾರ್ಡನ್ ಉದ್ಯಾನವನಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಕಾಮಗಾರಿಗಳ ಅವಧಿಯಲ್ಲಿ ನಾಗರಿಕರು ಸಹಕಾರ ನೀಡುವಂತೆ ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೋಹಪಾತ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments

Popular posts from this blog