ಜಯ ಧ್ವಜ ನ್ಯೂಸ್ , ರಾಯಚೂರು, ನ.25- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಯಚೂರು ವತಿಯಿಂದ ಮಕ್ಕಳನ್ನು ಪ್ರೋತ್ಸಾಹಿಸುವ ಚಿಗುರು ಕಾರ್ಯಕ್ರಮವನ್ನು ಸರ್ಕಾರಿ ಪ್ರೌಢಶಾಲೆ ಗಿಲ್ಲೆಸೂಗೂರು ಜಿಲ್ಲೆ ರಾಯಚೂರು ನಲ್ಲಿ ಇತ್ತೀಚೆಗೆ ಏರ್ಪಡಿಸಲಾಗಿತ್ತು. ವೈಷ್ಣವಿ ದೇಶಪಾಂಡೆ ಸುಗಮ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮ ಉದ್ಘಾಟನೆಯನ್ನು ಬಸನಗೌಡ ದದ್ದಲ್ , ಅಧ್ಯಕ್ಷರು ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಶಾಸಕರು ರಾಯಚೂರು ಗ್ರಾಮಾಂತರರವರು ನಡೆಸಿಕೊಟ್ಟರು. ಉತ್ತರಾದೇವಿ ಮಠಪತಿ ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಯಚೂರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Comments
Post a Comment