ಬಿಜೆಪಿ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಣೆ
                           ಜಯ ಧ್ವಜ ನ್ಯೂಸ್ , ರಾಯಚೂರು, ಡಿ.29-  ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ನೂತನವಾಗಿ ನೇಮಕವಾಗಿರುವ ಪದಾಧಿಕಾರಿಗಳಿಗೆ ನೇಮಕಾತಿ ಆದೇಶವನ್ನು ಪತ್ರವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ  ವೀರನಗೌಡ ಲೆಕ್ಕಿಹಾಳ ಹಾಗೂ  ಎನ್ ಶಂಕ್ರಪ್ಪ ಮಾಜಿ ವಿಧಾನ ಪರಿಷತ್ ಸದಸ್ಯರು  ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡ ಪಕ್ಷದ ಸಂಘಟನೆಗೆ ತಮ್ಮ ಹೆಚ್ಚಿನ ಸಮಯವನ್ನು ನೀಡಿ ಪಕ್ಷವನ್ನು ಜಿಲ್ಲೆಯಲ್ಲಿ ಸದೃಢವಾಗಿ ಸಂಘಟಿಸಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರ ಜಲ್ದಾರ್ ಸೇರಿದಂತೆ ನೂತನ ಪದಾಧಿಕಾರಿಗಳು ಉಪಸ್ಥಿತರಿದ್ದರು.

Comments

Popular posts from this blog