ನಾಳೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೂತನ ಜಿಲ್ಲಾ ಮಟ್ಟದ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ :     
ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ರಾಜ್ಯ ಪ್ರ.ಕಾರ್ಯದರ್ಶಿ ಲೋಕೇಶ ಭಾಗಿ.


ಜಯ ಧ್ವಜ ನ್ಯೂಸ್ , ರಾಯಚೂರು ,ಡಿ.24- ಕರ್ನಾಟಕ ಕಾರ್ಯನಿರತ ಪರ್ತ್ರಕರ್ತರ ಸಂಘದ ೨೦೨೫-೨೦೨೮ನೇ ಸಾಲಿನ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ನಗರದ ಕನ್ನಡ ಭವನದಲ್ಲಿ ಡಿ.25ರ ಸಂಜೆ 4 ಗಂಟೆಗೆ ಆಯೋಜಿಸಲಾಗಿದೆ.


ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕಾರ್ಯಕ್ರಮ ಉದ್ಘಾಟಿಸುವರು. ರಾಜ್ಯ ಪ್ರಧಾನ ಕಾರ್ಯದರ್ಶಿ ಜೆ.ಸಿ.ಲೋಕೇಶ ಜಿಲ್ಲಾ ಮತ್ತು ತಾಲೂಕು ಘಟಕಗಳ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧನೆ ಮಾಡುವರು. ರಾಜ್ಯ ಸಮಿತಿ ಸದಸ್ಯ ಬಸವರಾಜ ನಾಗಡದಿನ್ನಿ, ನಿಕಟಪೂರ್ವ ರಾಜ್ಯ ಸಮಿತಿ ಸದಸ್ಯ ಶಿವಮೂರ್ತಿ ಹಿರೇಮಠ, ನಿಕಟಪೂರ್ವ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಪಾಷಾ ಹಟ್ಟಿ ಸೇರಿದಂತೆ ಇತರರು ಪಾಲ್ಗೊಳ್ಳುವರು.

ಜಿಲ್ಲಾಧ್ಯಕ್ಷ ಆರ್.ಗುರುನಾಥ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದ ಬಳಿಕ ರಾಜ್ಯಾಧ್ಯಕ್ಷರ ಅಧ್ಯಕ್ಷತೆಯಲ್ಲಿ ರಾಯಚೂರಿನಲ್ಲಿ ಜರುಗಲಿರುವ ಪತ್ರಕರ್ತರ ರಾಜ್ಯ ಸಮ್ಮೇಳನದ ಕುರಿತು ಪೂರ್ವಭಾವಿ ಸಭೆ ಜರುಗಲಿದೆ. ಸಂಘದ ಎಲ್ಲ ಸದಸ್ಯರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸಂಘದ ಜಿಲ್ಲಾಧ್ಯಕ್ಷ ಆರ್.ಗುರುನಾಥ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ಧಯ್ಯಸ್ವಾಮಿ ಕುಕನೂರು ಪ್ರಕಟಣೆಯಲ್ಲಿ ಕೋರಿದ್ದಾರೆ.


Comments

Popular posts from this blog