ಫೆ.1ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಪ್ರವಾಸ

ಜಯ ಧ್ವಜ ನ್ಯೂಸ್ ,ರಾಯಚೂರು ಜ. 30-   ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಫೆ. 1 ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಅಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹೊರಟು 11 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ 11.10ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಹೊರಟು 11.40ಕ್ಕೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬಂಡೊಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹೆಲಿಪ್ಯಾಡ್ ಗೆ ಆಗಮಿಸಿ, ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್‌ನ ಶ್ರೀಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಶಾಖಾ ಮಠದಿಂದ ನಡೆಯುವ ಬ್ರಹ್ಮಲೀನರಾದ ಪರಮಪೂಜ್ಯ ಶ್ರೀಸಿದ್ದರಾಮನಂದಪುರಿ ಸ್ವಾಮೀಜಿಯವರ ಪುಣ್ಯಾರಾಧನೆ ಕಾರ್ಯಕ್ರಮ ಹಾಗೂ ನುಡಿನಮನ ಕಾರ್ಯಕ್ರಮದಲ್ಲಿ ಭಾಗಿಯಾಗುವರು.

ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ಮಧ್ಯಾಹ್ನ 3.30ಕ್ಕೆ ತಿಂಥಣಿ ಬ್ರಿಜ್‌ನ ಶ್ರೀಕಾಗಿನೆಲೆ ಮಹಾಸಂಸ್ಥಾನದಿಂದ ನಿರ್ಗಮಿಸಿ ಸುರಪುರ ತಾಲೂಕಿನ ಬಂಡೊಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹತ್ತಿರದ ಹೆಲಿಪ್ಯಾಡನಿಂದ ನಿರ್ಗಮಿಸಿ ಕಲಬುರಗಿ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments