ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಆದ್ಯತೆ ನೀಡಲಿ- ಡಾ.ಬಾಬುರಾವ್


ಜಯ ಧ್ವಜ ನ್ಯೂಸ್ , ರಾಯಚೂರು,ಫೆ.24- ಪ್ರಸಕ್ತ  2026-27ನೇ ಸಾಲಿನ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಮಾಜ ಸೇವಕ ಡಾ‌.ಬಾಬುರಾವ್ ಮನವಿ ಮಾಡಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು ಕೆಕೆಆರ್ ಡಿಬಿಗೆ 5000 ಕೋಟಿ ರೂ.ಅನುದಾನ ಕೊಡುವುದರ ಜೊತೆಗೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ವಿನಂತಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಿಂದುಳಿದಿರುವ ರಾಯಚೂರು ಜಿಲ್ಲೆಯ ರಾಯಚೂರು ನಗರಕ್ಕೆ ತೀರಾ ಅಗತ್ಯವಾಗಿ ಬೇಕಾಗಿರುವ ರಿಂಗ್ ರೋಡ್ ಗೆ ಅನುದಾನ ಒದಗಿಸಬೇಕು. ವಿಮಾನ ನಿಲ್ದಾಣ ಪೂರ್ಣಗೊಳಿಸಲು ಅಗತ್ಯ ಅನುದಾನ ಒದಗಿಸಬೇಕು. ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಹೆಚ್ಚಿನ ಅನುದಾನ ಕೊಡಬೇಕು ಎಂದು ಅವರು ಕೋರಿದ್ದಾರೆ.

Comments