ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ನವೀಕರಣ ಹಾಗೂ ಹೊಸ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ 

ಜಯ ಧ್ವಜ ನ್ಯೂಸ್ ,ರಾಯಚೂರು,ಫೆ .27- ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ೨೦೨೬-೨೭ನೇ ಸಾಲಿನ ಸದಸ್ಯತ್ವ ನವೀಕರಣ ಮತ್ತು ಹೊಸ ಸದಸ್ಯತ್ವ ಪಡೆಯಲು ರಾಜ್ಯ ಸಮಿತಿಯ ನಿರ್ದೇಶನದ ಮೇರೆಗೆ ರಾಯಚೂರು ಜಿಲ್ಲಾ ಸಮಿತಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಜಿಲ್ಲಾಧ್ಯಕ್ಷ ಆರ್.ಗುರುನಾಥ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಾ.೧ರಿಂದ ಆಯಾ ತಾಲೂಕಿನ ಅಧ್ಯಕ್ಷರಿಗೆ ಅರ್ಜಿ ಸಲ್ಲಿಸಬೇಕು. ರಾಯಚೂರು ನಗರ ವ್ಯಾಪ್ತಿಯ ಪತ್ರಕರ್ತರು ನಗರದ ಪತ್ರಿಕಾ ಭವನದಲ್ಲಿ ಅರ್ಜಿಗಳನ್ನು ಪಡೆಯಬಹುದು. ಅರ್ಜಿ ನವೀಕರಣ ಅಥವ ನೂತನ ಸದಸ್ಯತ್ವ ಪಡೆಯಲು ಹಿಂದಿನ ವರ್ಷದ ಸಂಘದ ಕಾರ್ಡ್, ಸಂಪಾದಕರು ಅಥವ ಮಾಧ್ಯಮ ಸಂಸ್ಥೆಗಳು ನೀಡಿದ ಆದೇಶ ಪ್ರತಿ, ಆಧಾರ್ ಕಾರ್ಡ್, ಎರಡು ಭಾವಚಿತ್ರ ಮತ್ತು ೫೧೦ ರೂ. ಶುಲ್ಕದೊಂದಿಗೆ ಅರ್ಜಿ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ಮಾ.೮ ಕೊನೆ ದಿನವಾಗಿದೆ ಎಂದು ತಿಳಿಸಿದ್ದಾರೆ.

ತಾಲೂಕು ಮಟ್ಟದಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ಆಯಾ ತಾಲೂಕು ಘಟಕಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಪದಾಧಿಕಾರಿಗಳು ಪರಾಮರ್ಶೆ ನಡೆಸಿ ಮಾ.೧೦ರೊಳಗೆ ಅರ್ಜಿ ಮತ್ತು ಶುಲ್ಕದ ಮೊತ್ತವನ್ನು ಜಿಲ್ಲಾ ಸಮಿತಿಗೆ ರವಾನಿಸಬೇಕು. ಹೊಸದಾಗಿ ಅರ್ಜಿ ಸಲ್ಲಿಸುವವರು ಎಸ್‌ಎಸ್‌ಎಲ್‌ಸಿ ತೇರ್ಗಡೆ ಪ್ರಮಾಣ ಪತ್ರ ಲಗತ್ತಿಸಬೇಕು. ಜತೆಗೆ ಕನಿಷ್ಠ ಎರಡು ವರ್ಷ ಸೇವಾನುಭವ ಹೊಂದಿರುವ ಕುರಿತು ಸಂಸ್ಥೆಗಳಿಂದ ದೃಢಿಕರಣ ಪತ್ರ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ. 



Comments

Popular posts from this blog