ಫೆ. 19 ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಜಿಲ್ಲಾಡಳಿತ ಸಭೆ


ಜಯ ಧ್ವಜ ನ್ಯೂಸ್ , ರಾಯಚೂರು, ಪೆ.9-ಇಂದು ಜಿಲ್ಲಾಡಳಿತ ಕಚೇರಿಯಲ್ಲಿ ಸಹಾಯಕ ಆಯುಕ್ತರಾದ ಶ್ರೀ ಹಂಪಣ್ಣ ಸಜ್ಜನ್ ಹಾಗೂ ತಹಸೀಲ್ದಾರ್ ಶ್ರೀ ಜಗದೀಶ್ ಅವರ ನೇತೃತ್ವದಲ್ಲಿ ಫೆಬ್ರವರಿ 19 ರಂದು ನಡೆಯಲಿರುವ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ ಸಂಬಂಧಿಸಿದ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ, ನಗರದ ಖಾಸ್ ಭಾವಿ ಹತ್ತಿರ ಇರುವ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದಿಂದ ಮೆರವಣಿಗೆ ಪ್ರಾರಂಭಿಸಿ ರಂಗಮಂದಿರದವರೆಗೆ ಭವ್ಯ ಮೆರವಣಿಗೆಯನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು.


ಮೆರವಣಿಗೆಯಲ್ಲಿ ಸಾಹಿತಿಗಳು, ವಿವಿಧ ಕಲಾ ತಂಡಗಳು ಭಾಗವಹಿಸಿ ಸಾಂಸ್ಕೃತಿಕ ವೈಭವವನ್ನು ಹೆಚ್ಚಿಸುವಂತೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿ ಜಯಂತಿಯನ್ನು ಯಶಸ್ವಿಗೊಳಿಸುವಂತೆ ಅಧಿಕಾರಿಗಳು ಮನವಿ ಮಾಡಿದರು.

ಈ ಸಭೆಯಲ್ಲಿ ಮರಾಠ ಸಮಾಜದ ಅಧ್ಯಕ್ಷರು ಹನುಮಂತ್ ಜಗತಾಪ, ರಾಯಚೂರು ಕ್ಷತ್ರಿಯ ಒಕ್ಕೂಟದ ಅಧ್ಯಕ್ಷರು ಅಶೋಕ್ ಕುಮಾರ್ ಮೈದರ್ಕರ್, ಮುಖಂಡರಾದ ಶ್ರೀನಿವಾಸ್ ಪತಂಗೆ, ಭೀಮಣ್ಣ ಜಾಧವ, ಅಂಬಾಜಿ ರಾವು ಮೈದರ್ಕರ್, ಸೂರ್ಯ ರಾವು, ರಘು ನನ್ನೊರೆ, ಅಮಿತ್ ಜಗಟಪ್, ಸತೀಶ್ ಜಗಟಪ್, ಅಮರೇಶ್, ಸಿದ್ದು, ಶರಣು, ಶಿವರಾಮ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಮತ್ತು ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಶಾಂತಿಯುತವಾಗಿ, ಸೌಹಾರ್ದತೆಯಿಂದ ಹಾಗೂ ಭವ್ಯವಾಗಿ ಆಚರಿಸುವುದಕ್ಕೆ ಎಲ್ಲರೂ ಸಹಕಾರ ನೀಡಬೇಕೆಂದು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.

Comments

Popular posts from this blog