Posts

Showing posts from March, 2026
Image
  ಮಧ್ಯಪ್ರಾಚ್ಯ ದೇಶಗಳಲ್ಲಿನ ಬಿಕ್ಕಟ್ಟು ರಾಯಚೂರು ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ ಜಯ ಧ್ವಜ ನ್ಯೂಸ್ ,ರಾಯಚೂರು ಮಾ.1- ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಈ ಕೆಳಗಿನ ಮಾಹಿತಿಯನ್ನು ಹಂಚಿಕೊಂಡಿದೆ:   ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿ ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು (Airspace) ಮಾರ್ಚ್ 2ರವರೆಗೆ ಮುಚ್ಚಲಾಗಿದೆ.   ಈ ಅನಿರೀಕ್ಷೀತ ಅಡಚಣೆಯಿಂದಾಗಿ ಹಾಗೂ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ.   ಜಿಲ್ಲಾಡಳಿತದ ಕ್ರಮಗಳು : ಮಾನ್ಯ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ, ರಾಜ್ಯ ಮತ್ತು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 24x7 ಕಾರ್ಯನಿರ್ವಹಿಸುತ್ತಿವೆ.   ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರಿ ಕಚೇರಿಗಳು ನೀಡುವ ಸೂಚನೆಗಳನ್ನು ಜಿಲ್ಲಾಡಳಿತವು ನಿರಂತರವಾಗಿ ಗಮನಿಸುತ್ತಿದೆ.   ಸಹಾಯವಾಣಿ ಸಂಖ್ಯೆಗಳಿಗೆ ರಾಯಚೂರು ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂ...
Image
  ಜಿಲ್ಲಾಡಳಿತದಿಂದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ ಜಯ‌ ಧ್ವಜ ನ್ಯೂಸ್ , ರಾಯಚೂರು ಮಾ.1-  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಇಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಿಸಲಾಯಿತು. ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮಕ್ಕೆ ರಾಯಚೂರು ಸಹಾಯಕ ಆಯುಕ್ತರಾದ ಡಾ.ಹಂಪಣ್ಣ ಸಜ್ಜನ್ ಅವರು ಚಾಲನೆ ನೀಡಿದರು. ಈ ವೇಳೆ ಅವರು ಮಾತನಾಡಿ, ರೇಣುಕಾಚಾರ್ಯರ  ವಿಚಾರಧಾರೆಗಳು ಹಾಗೂ ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು. ಕಲಬುರಗಿ ಜಿಲ್ಲೆಯ ಕಾಳಗಿ ತಾಲ್ಲೂಕಿನ ಬಣಮಗಿಯ ಶ್ರೀ ರಾಚೋಟೇಶ್ವರ ಶಿವಾಚಾರ್ಯರು ಉಪನ್ಯಾಸ ನೀಡಿ, ಎಲ್ಲ ಧರ್ಮಗಳಿಗೆ ಆಶ್ರಯ ನೀಡಿದ ಧರ್ಮ ವೀರಶೈವ ಧರ್ಮವಾಗಿದೆ. ಮಕ್ಕಳಿಗೆ ಸಂಸ್ಕಾರ, ಲಿಂಗ ಪೂಜೆ ಕಲಿಸಬೇಕು. ಎಲ್ಲ ಧರ್ಮಗಳಿಂತ ವೀರಶೈವ ಧರ್ಮ ದೊಡ್ಡದಾಗಿದೆ. ಪಂಚ ಪೀಠಗಳನ್ನು ಸ್ಥಾಪಿಸಿ ಪಂಚ ಪೀಠಾಧಿಕಾರಿಗಳನ್ನು ನೇಮಿಸಿದರು.  ರೇಣುಕಾಚಾರ್ಯರು ಕೇವಲ ಒಂದು ಸಮಾಜದವರನ್ನು ಪ್ರೀತಿಯಿಂದ ‌ಕಾಣದೆ ಎಲ್ಲ ಸಮಾಜದವರನ್ನು ಪ್ರೀತಿ ವಿಶ್ವಾಸದಿಂದ ನೋಡಿದ್ದಾರೆ ಎಂದರು. ಮೆರವಣಿಗೆಗೆ ಚಾಲನೆ : ಇದಕ್ಕೂ ಮುಂಚೆ, ನಗರದ ಹೈದ್ರಾಬಾದ್ ಬೈಪಾಸ್ ರಸ್ತೆ ಬಳಿರುವ ಶ್ರೀ ಜಗದ್ಗುರು ರೇಣುಕಾಚಾರ್ಯ ವೃತ್ತದಲ್ಲಿ, ಶ್ರೀ ರೇಣುಕಾಚಾರ್ಯರ ಭಾವಚಿತ್ರದ  ಮೆರವಣಿಗೆಗೆ ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಶಿವರಾಜ ಎ...