ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರ್ಣಗೊಳಿಸಿದ ಡಿಕೆ ಶಿವಕುಮಾರ್ : ಶುಭಾಶಯ ಕೋರಿಕೆ. ಜಯ ಧ್ವಜ ನ್ಯೂಸ್ , ರಾಯಚೂರು, ಮಾ.10- ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ರಾಜ್ಯದ ಉಪ ಮುಖ್ಯ ಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಬೆಂಗಳೂರಿನ ಅವರ ನಿವಾಸದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಎ.ವಸಂತಕುಮಾರ, ಸಿಂದನೂರಿನ ಶಾಕಸರಾದ ಹಂಪನಗೌಡ ಬಾದರ್ಲಿಯವರು ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಬಸವರಾಜ ಪಾಟೀಲ್ ಇಟಗಿಯವರು ಭೇಟಿಯಾಗಿ ಶುಭ ಕೋರಿದರು.
ಅವರ ನೇತೃತ್ವದಲ್ಲಿ ಪಕ್ಷವು ರಾಜ್ಯದಲ್ಲಿ ಅಭೂತಪೂರ್ವ ಜಯಸಾಧಿಸಿ ಸರಕಾರ ರಚಿಸಿದೆ, ಪಕ್ಷ ಸಂಘಟನೆಯಲ್ಲಿ ಶಿವಕುಮಾರ ತೋರಿಸಿದ ಉತ್ಸಾಹ, ಕಾರ್ಯಕರ್ತರನ್ನು ಸಜ್ಜುಗೊಳಿಸಿದ ಕಾರಣ ಹಿಂದಿನ ಬಿಜೆಪಿ ಪಕ್ಷದ ದುರಾಡಳಿತದ ವಿರುದ್ದ ನಿರಂತರ ಹೋರಾಟ ಮಾಡಿದ ಕಾರಣ ರಾಜ್ಯದಲ್ಲಿ ವಿರೋಧ ಪಕ್ಷಗಳು ಧೂಳಿಪಠವಾಗಿದೆ ಎಂದು ಬಣ್ಣಿಸಿದ್ದಾರೆ.
ಈ ವರ್ಷ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಹಾಗೂ ಗ್ರಾಮೀಣ ಮತ್ತು ನಗರ ಪ್ರದೇಶಗಳ ಸ್ಥಳೀಯ ಸಂಸ್ಥೆಗಳ ಚುನಾವಣೆ ಇರುವದರಿಂದ ಪಕ್ಷವನ್ನು ಮತ್ತಷ್ಟು ಚುರುಕುಗೊಳಿಸಿ ಮುನ್ನಡೆಸಲಿ ಎಂದು ಹಾರೈಸಿದರು.


Comments
Post a Comment