ಮಾದಿಗ ಸಮಾಜಕ್ಕೆ ಕಾಂಗ್ರೆಸ್ ಸರ್ಕಾರದಿಂದ ಎಂದಿಗೂ ನ್ಯಾಯ ಸಿಗುವುದಿಲ್ಲ- ರವೀಂದ್ರ ಜಲ್ದಾರ್ ಆಕ್ರೋಶ 

ಜಯ ಧ್ವಜ ನ್ಯೂಸ್ , ರಾಯಚೂರು, ಮಾ.27- ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ನೇತೃತ್ವದಲ್ಲಿ ಒಳ ಮೀಸಲಾತಿ ಅನುಷ್ಠಾನ ಜಾರಿ ವಿಷಯದಲ್ಲಿ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳದೆ ಇಂದು ಮಾದಿಗರಿಗೆ ಮತ್ತೊಮ್ಮೆ ಮಹಾ ದ್ರೋಹ ಮಾಡಿದ್ದಾರೆ ಮಾದಿಗರ ಸಹನೆಯನ್ನು ಪರೀಕ್ಷೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಮಾದಿಗರ ಅಕ್ರೋಶದ ಶಾಪ ತಟ್ಟೆ ತಟ್ಟುತ್ತದೆ ಎಂದ ಮಾದಿಗ ಸಮಾಜದ ರಾಜ್ಯ ಹಿರಿಯ ಮುಖಂಡ  ರವೀಂದ್ರ ಜಲ್ದಾರ್ ಅವರು ನಾಳೆ ನಡೆಯಬೇಕಾಗಿದ್ದ ವಿಶೇಷ ಸಚಿವ ಸಂಪುಟ ಸಭೆ ಮುಂದೋಡಿದ್ದು ಹಾಗೂ ಒಳ ಮೀಸಲಾತಿ ಜಾರಿಗಾಗಿ  ಷಡಕ್ಷರಮುನಿ ಸ್ವಾಮೀಜಿಗಳು ಹರಿಹರದಿಂದ ಬೆಂಗಳೂರಿನ ವಿಧಾನಸೌಧದ ವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆಯ ಹೋರಾಟಕ್ಕೆ ಕಾಂಗ್ರೆಸ್ ಸರ್ಕಾರ ಅವರನ್ನು ಬಂಧಿಸಿ ಹೋರಾಟವನ್ನು ದಿಕ್ಕು ತಪ್ಪಿಸಿರುವ ಕಾಂಗ್ರೆಸ್ ಸರ್ಕಾರದ ನಡೆ ಮಾದಿಗ ವಿರೋಧ ನೀತಿಯನ್ನು ಉಗ್ರವಾಗಿ ಖಂಡಿಸುತ್ತಾ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಮಾದಿಗರಿಂದ ತಕ್ಕ ಪಾಠ ಕಲಿಸುವುದರ ಜೊತೆಗೆ ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಗಳಲ್ಲಿ ಮಾದಿಗರ ಶಕ್ತಿ ಪ್ರದರ್ಶನ ಮಾಡಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ನಾವೆಲ್ಲರೂ ಕಂಕಣಬದ್ಧರಾಗಿ ಹೋರಾಡಬೇಕು ಎಂದು ಪತ್ರಿಕಾ ಹೇಳಿಕೆ ಮುಖಾಂತರ ಕರೆ ನೀಡಿದ್ದಾರೆ.

Comments

Popular posts from this blog