ಡಾ.ಬಾಬು ಜಗಜೀವನ ರಾಮ್ 119ನೇ ಜನ್ಮ ದಿನಾಚರಣೆ:
ವಿವಿಧ ಗಣ್ಯರಿಂದ ಮಾಲಾರ್ಪಣೆ

ಜಯ‌ ಧ್ವಜ ನ್ಯೂಸ್ ,ರಾಯಚೂರು ಏ-5  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರ ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಭಾರತ ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಮ್ ಅವರ 119ನೇ ಜನ್ಮ ದಿನಾಚರಣೆಯ ಅಂಗವಾಗಿ ಇಂದು ನಗರದ ರೈಲ್ವೆ ನಿಲ್ದಾಣದ ಹತ್ತಿರ ಇರುವ ಡಾ.ಬಾಬು ಜಗಜೀವನ ರಾಮ್ ಅವರ ಪುತ್ಥಳಿಗೆ ವಿವಿಧ ಗಣ್ಯರಿಂದ ಪೂಜೆ ಕಾರ್ಯಕ್ರಮ ನೆರವೇರಿಸಿ, ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ್ ನಾಯಕ, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ., ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಹರೀಶ್, ರಾಯಚೂರು ತಹಶಿಲ್ದಾರ್ ಸುರೇಶ್ ವರ್ಮ,  ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಕೃಷ್ಣ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪ್ರವೀಣ್ ಕುಮಾರ್, ಮುಖಂಡರಾದ ರವಿ ಭೋಸರಾಜು, ನರಸಿಂಹಲು ಮಾಡಗಿರಿ, ಕೆ.ಶಾಂತಪ್ಪ, ಎಂ.ವಿರೂಪಾಕ್ಷಪ್ಪ, ರವೀಂದ್ರ ಜಲ್ದಾರ್ ,ರಾಜು, ಪವನ್ ಕುಮಾರ್,  ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಮಾಜದ ಇತರರು ಇದ್ದರು. ಇತ್ತೀಚಿಗೆ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾದ ರಾಯಚೂರು ಡಿವೈಎಸ್ಪಿ ಶಾಂತವೀರ ಅವರಿಗೆ ಗಣ್ಯರಿಂದ  ಸನ್ಮಾನ ಮಾಡಲಾಯಿತು.

ನಂತರ ಭಾರತದ ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಮ್ ಅವರ 119ನೇ ಜನ್ಮ ದಿನಾಚರಣೆಯ ಅಂಗವಾಗಿ ನಗರದ ರೈಲ್ವೆ ನಿಲ್ದಾಣದಿಂದ ರಂಗಮಂದಿರದವರೆಗೂ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಗೆ ಗಣ್ಯರು ಚಾಲನೆ ನೀಡಿದರು.

Comments

Popular posts from this blog