ಮಂತ್ರಾಲಯ ಬಳಿ ಭೀಕರ ಅಪಘಾತ 8 ಜನ ದುರ್ಮರಣ
ಜಯ ಧ್ವಜ ನ್ಯೂಸ್, ರಾಯಚೂರು, ಏ.16- ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ಬಳಿಯ ಚಿಲಕನಡೋಣಿ ಹತ್ತಿರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರಾಯರ ದರ್ಶನಕ್ಕಾಗಿ ಮಂತ್ರಾಲಯಕ್ಕೆ ಬರುತ್ತಿದ್ದ ಭಕ್ತರು ಸಾವನ್ನಪ್ಪಿದ್ದಾರೆ .ಅಪಘಾತದಲ್ಲಿ ಮೂರು ವರ್ಷದ ಮಗು ಸೇರಿದಂತೆ ಐವರು ಮಹಿಳೆಯರು , ಇಬ್ಬರು ಪುರುಷರು ಸಾವನ್ನಪ್ಪಿದ ಧಾರುಣ ಘಟನೆ ಜರುಗಿದೆ.
ಬೀದರ್‌ನಿಂದ ತುಮಕೂರಿಗೆ ಹೋಗುತ್ತಿದ್ದ ಫ್ಲೈಯಾಶ್ ಟ್ಯಾಂಕರ್ ಹಾಸನ, ಚಿಕ್ಕಮಗಳೂರು ಮೂಲದ 18 ಜನರು ಮಂತ್ರಾಲಯಕ್ಕೆ ಬರುತ್ತಿದ್ದ ಬುಲೆರೋ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬುಲೆರೋ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಅಮೃತ, ತೇಜಸ್ವಿನಿ, ಧನ್ಯ, ದೀಪಿಕ, ದಿಕ್ಷಿತ, ಪ್ರತಾಪ್, ಕುಮಾರ್, ಯಶೋದಮ್ಮ ಮೃತ ದುರ್ದೈವಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ . 9 ಜನ ಗಾಯಾಳುಗಳನ್ನು ಕರ್ನೂಲು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.


Comments
Post a Comment