ಸಿಯಾತಲಾಬ್ ಕೊಳಗೇರಿ ಅಭಿವೃದ್ಧಿ ನಿಗಮ ಮನೆ ನಿರ್ಮಾಣ ಕಾಮಗಾರಿ ವೀಕ್ಷಣೆ : ಮನೆಗಳ ನಿರ್ಮಾಣ ವಿಳಂಬವಾದರೆ ಅಧಿಕಾರಿಗಳೆ ಹೊಣೆ- ಎ.ವಸಂತಕುಮಾರ ಜಯ ಧ್ವಜ ನ್ಯೂಸ್ ,ರಾಯಚೂರು, ಏ.23- ನಗರದ ಸಿಯಾತಲಾಬ್ ಪ್ರದೇಶಕ್ಕೆ ಇಂದು ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ಅವರು ಭೇಟಿ ನೀಡಿದರು.
ಕರ್ನಾಟಕ ಕೊಳಗೇರಿ ಅಭಿವೃದ್ಧಿ ನಿಗಮದಿಂದ ನಡೆಯುತ್ತಿರುವ ಮನೆಗಳ ನಿರ್ಮಾಣ ಕಾಮಗಾರಿ ವೀಕ್ಷಣೆ ಮಾಡಿ, ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಇದೆ ವೇಳೆ ಸ್ಥಳೀಯ ನಿವಾಸಿಗಳು ತಮ್ಮ ಅಳಲನ್ನು ತೋಡಿಕೊಂಡು ಅನಗತ್ಯವಾಗಿ ಮನೆಗಳ ನಿರ್ಮಾಣ ವಿಳಂಬ ಮಾಡುತ್ತಿದ್ದಾರೆ, ನಾವು ರಸ್ತೆಯ ಮೇಲೆ ಇರುವಂತಾಗಿದೆ ಎಂದು ಹೇಳಿದರು.
ಬಹುಮಹಡಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು, ಒಟ್ಟು 108 ಫಲಾನುಭವಿಗಳಿಗೆ ಮನೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ, ಆದರೆ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ವಿಳಂಬ ವಾಗುತ್ತಿರುವದು ಯಾವುದೇ ಕಾರಣಕ್ಕೂ ಸಹಿಸಲು ಸಾದ್ಯವಿಲ್ಲ ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು, ವಿಳಂಬ ವಾದರೇ ನಿಮ್ಮನ್ನೇ ಹೊಣೆಗಾರರನ್ನಾಗಿ ಮಾಡಿ ಕ್ರಮ ಜರುಗಿಸಲಾಗುವದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಯೋಜನಾ ಆಯೋಗದ ಸದಸ್ಯ ಡಾ.ರಝಾಕ ಉಸ್ತಾದ, ಕೆ.ಅಸ್ಲಂ ಪಾಶಾ, ಮೊಹಮ್ಮದ ಉಸ್ಮಾನ, ಕೆ.ಇ.ಕುಮಾರ,ರಮೇಶ ರೋಸ್ಲಿ, ಅಂಜಿನಕುಮಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.




Comments
Post a Comment