ವಿಕಲಚೇತನರ ಪುನರ್ವಸತಿ ಕೇಂದ್ರ ಕಟ್ಟಡ ನಿರ್ಮಾಣಕ್ಕೆ   ಜಿಲ್ಲಾ ಉಸ್ತುವಾರಿ ಸಚಿವರಿಂದ ಭೂಮಿ ಪೂಜೆ 

ಜಯ ಧ್ವಜ ನ್ಯೂಸ್ ,ರಾಯಚೂರು ಏ.8-  2025-26ನೇ ಸಾಲಿನ ರಾಜ್ಯ ಹಣಕಾಸು ಆಯೋಗ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತ್ ಅನಿರ್ಬಂಧಿತ ಯೋಜನೆಯಡಿ ವಿಕಲಚೇತನರಿಗೆ ಮೀಸಲಿಟ್ಟ ಅನುದಾನದಡಿ ವಿಕಲಚೇತನರ ಪುನರ್ವಸತಿ ಕೇಂದ್ರ ಕಟ್ಟಡ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮಕ್ಕೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಇಂದು ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆವರಣದಲ್ಲಿ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ್, ರಾಯಚೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪವನ್ ಕಿಶೋರ್ ಪಾಟೀಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ ಕಾಂದೂ, ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮಹೋಪಾತ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಕ್ಷು ಗಿರಿ, ಅಪರ ಜಿಲ್ಲಾಧಿಕಾರಿ ಶಿವಾನಂದ, ಜಿಲ್ಲಾ ಪಂಚಾಯತ ಯೋಜನೆ ಅಧಿಕಾರಿ ಶರಣಬಸವರಾಜ, ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ಜಿಲ್ಲಾ ಪಂಚಾಯತ್ ಲೆಕ್ಕಾಧಿಕಾರಿ ವಿಜಯಶಂಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನವೀನ್ ಕುಮಾರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶ್ರೀದೇವಿ, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಮನ್ಸೂರ್ ಅಹಮದ್, ರಾಯಚೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವಾರ್, ಮಾಜಿ ಎಂಎಲ್ಸಿ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಪಾಟೀಲ ಇಟಗಿ, ಮುಖಂಡರಾದ ಡಾ.ರಝಾಕ್ ಉಸ್ತಾದ್  ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Comments

Popular posts from this blog