ವಿಶ್ವಕರ್ಮ ಸಮಾಜದಿಂದ ಪ್ರತಿಭಾ ಪುರಸ್ಕಾರ ಅರ್ಜಿ ಆಹ್ವಾನ.


 ಜಯಧ್ವಜ ನ್ಯೂಸ್  ,ರಾಯಚೂರು, ಮೇ 1.

ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಯಚೂರು ಹಾಗೂ ಜಿಲ್ಲಾ ವಿಶ್ವಕರ್ಮ ಸಮಾಜ ರಾಯಚೂರು ಇವರ ಸಹಯೋಗದಲ್ಲಿ ರಾಯಚೂರು ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರವನ್ನು ಜೂನ್ ತಿಂಗಳಲ್ಲಿ ಹಮ್ಮಿಕೊಳ್ಳಲಾಗಿದೆ.

 ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ದ್ವಿತೀಯ ವರ್ಷದಲ್ಲಿ ಶೇ. 80ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರದಲ್ಲಿ ತಮ್ಮ ಅಂಕಪಟ್ಟಿ ಭಾವಚಿತ್ರ ವಿಳಾಸ ಮೊಬೈಲ್ ಸಂಖ್ಯೆಯೊಂದಿಗೆ ಈ ತಿಂಗಳು 15 ರ ಒಳಗಾಗಿ ಜನಾರ್ಧನ ಮುಮ್ಮಡಿ ವಿಶ್ವಕರ್ಮ ಮೊಬೈಲ್ ಸಂಖ್ಯೆ 8197448606 ಇವರಿಗೆ ವಾಟ್ಸಪ್ ಮೂಲಕ ಕಳಿಸಬೇಕು. ಪ್ರತಿಭಾ ಪುರಸ್ಕಾರದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ಪ್ರಮಾಣ ಪತ್ರ ಸಸಿ ಮೆಡಲ್ ವಿತರಿಸಲಾಗುವುದು. ರಾಯಚೂರು ಜಿಲ್ಲೆಯ  ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಯಚೂರು ಜಿಲ್ಲಾಧ್ಯಕ್ಷರಾದ ಮಾರುತಿ ಬಡಿಗೇರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments

Popular posts from this blog