ರಾಷ್ಟ್ರೀಯ ಪರಿಶಿಷ್ಟ ಪಂಗಡ ಆಯೋಗದ ಸದಸ್ಯರಿಂದ ವಿವಿಧ ಕಡೆ ಭೇಟಿ ಪರಿಶೀಲನೆ
ಜಯ ಧ್ವಜ ನ್ಯೂಸ್ ,ರಾಯಚೂರು ಏ. 16 . ರಾಯಚೂರು ಜಿಲ್ಲೆಯಲ್ಲಿ ಪ್ರವಾಸದಲ್ಲಿರುವ ರಾಷ್ಟ್ರೀಯ ಪರಿಶಿಷ್ಟ ಪಂಗಡ ಆಯೋಗದ ಸದಸ್ಯರಾದ ಜಟೋತು ಹುಸೇನ್ ಅವರು ಏಪ್ರಿಲ್ 16ರ ಗುರುವಾರ ದಂದು ರಾಯಚೂರಿನ ವಿವಿಧ ಕಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮೊದಲಿಗೆ ರಾಯಚೂರು ನಗರದ ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ಸೌಕರ್ಯಗಳ ಬಗ್ಗೆ ಖುದ್ದು ಪರಿಶೀಲಿಸಿ ಮಾಹಿತಿ ಪಡೆದುಕೊಂಡರು. ಆಸ್ಪತ್ರೆಗೆ ಬರುವ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದದಿಂದ ಚಿಕಿತ್ಸೆ ನೀಡಬೇಕು. ಸರ್ಕಾರದ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಮಾಹಿತಿಯನ್ನು ನೀಡಬೇಕು. ಹಾಗೂ ಚಿಕಿತ್ಸೆಗಳ ಮಾಹಿತಿಯನ್ನು ನಾಮಫಲಕದಲ್ಲಿ ಪ್ರದರ್ಶನ ಮಾಡಬೇಕು. ಅಲ್ಲದೆ ಆಸ್ಪತ್ರೆಗೆ ಒಳಗೆ ಹಾಗೂ ಹೊರಗಡೆ ಸ್ವಚ್ಛತೆಯನ್ನು ಕಾಪಾಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ಆಸ್ಪತ್ರೆಯ ವಿವಿಧ ವಿಭಾಗದ ವಾಡ್೯ ಗಳಿಗೆ ಭೇಟಿ ನೀಡಿ, ರೋಗಿಗಳ ಅಹವಾಲು ಆಲಿಸಿ, ತಾಯಿ ಮತ್ತು ಮಕ್ಕಳ ವಿಭಾಗದಲ್ಲಿ ಎಸಿ ಅಳವಡಿಸಬೇಕು. ಆಸ್ಪತ್ರೆಗೆ ಬರುವ ರೋಗಿಗಳ ಸಂಬಂಧಿಕರಿಗೆ ಕುಳಿತ ಊಟ ಮಾಡಲು ಛತ್ರದ ವ್ಯವಸ್ಥೆ ಮಾಡಲು ಆಯೋಗದಿಂದ ಆರ್ಥಿಕ ನೆರವು ನೀಡಲಾಗುವುದು. 15ದಿನಗ ಒಳಗಾಗಿ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
*ವಿವಿಧ ವಸತಿ ನಿಲಯಗಳಿಗೆ ಭೇಟಿ:* ರಾಯಚೂರು ನಗರದ ವಡವಟ್ಟಿ ಹಾಗೂ ಅಸ್ಕಿಹಾಳಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ಭೇಟಿ, ವಿದ್ಯಾರ್ಥಿಗಳಿಗೆ ನೀಡುವ ಸೌಲಭ್ಯಗಳನ್ನು ಪರಿಶೀಲಿಸಿದರು.ವಸತಿ ನಿಲಯಗಳಿಗೆ ಪೂರೈಕೆಯಾಗುವ ಆಹಾರ ಧಾನ್ಯಗಳು ಮತ್ತು ಅದರ ಗುಣಮಟ್ಟದಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗಬಾರದು. ಕಡ್ಡಾಯವಾಗಿ ಬಯೋಮೆಟ್ರಿಕ್‌ನಲ್ಲಿನ ಮಕ್ಕಳ ಹಾಜರಾತಿಯನ್ನೇ ಪರಿಗಣನೆಗೆ ಪಡೆಯಬೇಕು. ರಿಜಿಸ್ಟರನಲ್ಲಿನ ಹಾಜರಾತಿಗೂ ಬಯೋಮೆಟ್ರಿಕನಲ್ಲಿ ಹಾಜರಾತಿಗೂ ವ್ಯತ್ಯಾಸವಾಗಕೂಡದು. ಈ ನಿಟ್ಟಿನಲ್ಲಿ ವಸತಿ ನಿಲಯಗಳಲ್ಲಿ ವ್ಯವಸ್ಥೆಯನ್ನು ಮಾಡಬೇಕೆಂದು ಸಂಬಂಧಿಸಿದ ನಿಲಯ ಪಾಲಕರಿಗೆ ಸೂಚನೆ ನೀಡಿದರು.ಇದೇ ಸಂದರ್ಭದಲ್ಲಿ ಜಿಲ್ಲಾ ಪರಿಶಿಷ್ಟ ಪಂಗಡ ವರ್ಗಗಳ ಕಲ್ಯಾಣಾಧಿಕಾರಿ ಶಿವಮಾನಪ್ಪ, ರಿಮ್ಸ್ ಆಸ್ಪತ್ರೆಯ ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ.ಸೂರ್ಯಕಾಂತ್, ಡಾ.ಅರವಿಂದ ಸಾಗವಿ, ಡಾ.ಜಯಕೃಷ್ಣ, ಡಾ.ಸೋಮಶೇಖರ, ಡಾ. ಶರಣಬಸವ ಸೇರಿದಂತೆ ರಿಮ್ಸ್ ಆಸ್ಪತ್ರೆಯ ವಿವಿಧ ವಿಭಾಗದ ಮುಖ್ಯಸ್ಥರು, ವಿವಿಧ ವಸತಿ ನಿಲಯಗಳ ನಿಲಯ ಪಾಲಕರು ಇದ್ದರು.


Comments
Post a Comment