ಅಂಜುಮನ್ - ಎ ರಾಯಚೂರು ವತಿಯಿಂದ
ಮೇ 11 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಜಯ ಧ್ವಜ ನ್ಯೂಸ್ ,ರಾಯಚೂರು, ಮೇ. 9- ನಗರದ ಅಂಜುಮನ್-ಎ-ರಾಯಚೂರು ಸಂಸ್ಥೆಯ ವತಿಯಿಂದ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತ್ತ್ಯುತ್ತಮ ಸಾಧನೆ ಮಾಡಿದ ನಗರದ ವಿದ್ಯಾರ್ಥಿಗಳನ್ನು ಗೌರವಿಸಲು ‘ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ’ ಸಮಾರಂಭವನ್ನು ಆಯೋಜಿಸಲಾಗಿದೆ .
ಮೇ.11 ರಂದು ಸೋಮವಾರ ಸಂಜೆ 6:00 ಗಂಟೆಗೆ ನಗರದ ಸ್ಟೇಷನ್ ರಸ್ತೆಯಲ್ಲಿರುವ ರಂಗಮಂದಿರದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು , ನಗರದ ಯುವ ಪ್ರತಿಭೆಗಳನ್ನು ಗುರುತಿಸಿ, ಅವರ ಸಾಧನೆಯನ್ನು ಸಂಭ್ರಮಿಸುವುದು ಮತ್ತು ಮುಂದಿನ ಹಂತದ ಶಿಕ್ಷಣಕ್ಕೆ ಸ್ಫೂರ್ತಿ ನೀಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದ್ದು , ಈ ಕಾರ್ಯಕ್ರಮದಲ್ಲಿ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎ. ವಸಂತ ಕುಮಾರ್ ಹಾಗೂ ರಾಯಚೂರು ಗ್ರಾಮೀಣ ಶಾಸಕ ಮತ್ತು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಶ್ರೀ ಬಸನಗೌಡ ದದ್ದಲ್ ಪಾಲ್ಗೊಳ್ಳಲಿದ್ದು,
ಅಂಜುಮನ್-ಎ-ರಾಯಚೂರು ಸಂಚಾಲಕರಾದ ಜನಾಬ್ ಹಾರಿಸ್ ಸಿದ್ದಿಕಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಹಜರತ್ ಸೈಯದ್ ಶಾ ನಬಿ ಮೊಹಿಯುದ್ದೀನ್ ಖಾದ್ರಿ ಚಾಂದ್ ಪೀರ್ ಸಾಹೇಬ್ ಹಾಗೂ ಮೌಲಾನಾ ಹಫೀಜ್ ಸೈಯದ್ ಅಬ್ದುಲ್ ಲತೀಫ್ ಲೌಬಾಲಿ ಸಾಹೇಬ್ ಸೇರಿದಂತೆ ಕಾರ್ಯಕ್ರಮದಲ್ಲಿ ಮಾಜಿ ನಗರಸಭೆ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು ಹಾಗೂ ಶಿಕ್ಷಣ ತಜ್ಞರು ಭಾಗವಹಿಸಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಮತ್ತು ಪಾಲಕರು ಆಗಮಿಸಬೇಕೆಂದು ಡಾ.ರಝಾಕ್ ಉಸ್ತಾದ್ ಪ್ರಕಟಣೆಯಲ್ಲಿ ಕೋರಿದ್ದಾರೆ.

Comments
Post a Comment