ಜಿಲ್ಲಾಡಳಿತದಿಂದ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಸರಳವಾಗಿ ಆಚರಣೆ


ಜಯ ಧ್ವಜ ನ್ಯೂಸ್ ರಾಯಚೂರು ,ಮೇ.10-

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಮಹಾನಗರ ‌ಪಾಲಿಕೆ, ಕನ್ನಡ ‌ಮತ್ತು ಸಂಸ್ಕೃತಿ ‌ಇಲಾಖೆ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಇಂದು ಸರಳವಾಗಿ ಆಚರಿಸಲಾಯಿತು.

ಕರ್ನಾಟಕ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ  ಡಿ.ಸುಧಾಕರ್ ಅವರ ನಿಧನದ ಹಿನ್ನೆಲೆಯಲ್ಲಿ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಸಿ ಮೂರು ದಿ‌ನಗಳ ಕಾಲ ರಾಜ್ಯದಾದ್ಯಂತ ಶೋಕಾಚರಣೆ ಆಚರಿಸಲಾಗುತ್ತಿರುವುದರಿಂದ ಸ್ತ್ರೀ ಕುಲದ ಆದರ್ಶ, ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿ ಕಾರ್ಯಕ್ರಮವನ್ನು ರಾಯಚೂರು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ  ಇಂದು ಅತ್ಯಂತ ಸರಳ ಹಾಗೂ ಭಕ್ತಿ ಪೂರ್ವಕವಾಗಿ ಆಚರಿಸಲಾಯಿತು.


ಮಂಗಳವಾರಪೇಟೆ ವೀರಸಂಗಮೇಶ್ವರ ಮಹಾಸ್ವಾಮಿಗಳು, ಸೋಮವಾರಪೇಟೆ ಹಿರೇಮಠದ ಅಭಿನವ ರಾಚೋಟಿ ವೀರಶಿವಾಚಾರ್ಯ ಸ್ವಾಮೀಜಿ ಹಾಗೂ ಕರ್ನಾಟಕ ಸರಕಾರದ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ  ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ,  ಸಹಾಯಕ ಆಯುಕ್ತರಾದ ಡಾ.ಹಂಪಣ್ಣ ಸಜ್ಜನ್,  ತಹಶಿಲ್ದಾರ್ ಸುರೇಶ್ ವರ್ಮಾ ಅವರು ಶಿವಶರಣೆ ಹೇಮರಡ್ಡಿ ಮಲ್ಲಮ್ಮ  ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಯಚೂರು ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ಉಪ ಆಯುಕ್ತರಾದ  ಶರಣಪ್ಪ‌ ಸತ್ಯಂಪೇಟೆ, ಸಿಪಿಐ ಉಮೇಶ್ ಕಾಂಬ್ಳೆ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಕೃಷ್ಣ ಶಾವಂತಗೇರಾ, ಸಮಾಜದ ಮುಖಂಡರಾದ ಡಾ. ಬಸನಗೌಡ ಪಿ.ಪಾಟೀಲ್, ರಾಮನಗೌಡ ಏಗನೂರು, ಶರಣಪ್ಪ ಸೇರಿದಂತೆ ಸಮಾಜ ಇತರೆ ಮುಖಂಡರು, ಸಾರ್ವಜನಿಕರು ಇದ್ದರು.

ಕಾರ್ಯಕ್ರಮ ಪ್ರಾರಂಭದಲ್ಲಿ ಸಚಿವ ಡಿ.ಸುಧಾಕರ್ ಅವರ  ನಿಧನದ ಹಿನ್ನೆಲೆಯಲ್ಲಿ ಐದು ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು.

Comments

Popular posts from this blog