ಬಾಗಲಕೋಟೆ ಉಪಚುನಾವಣೆ ಕಾಂಗ್ರೆಸ್ ಗೆಲುವು ವಸಂತಕುಮಾರ ಹರ್ಷ ಜಯ ಧ್ವಜ ನ್ಯೂಸ್ , ರಾಯಚೂರು , ಮೇ.4- ಬಾಗಲಕೋಟೆ ವಿಧಾನ ಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ 21800 ಮತಗಳ ಅಂತರದಿಂದ ಗೆಲವು ಸಾಧಿಸಿರುವದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷದ ಸರಕಾರಕ್ಕೆ ಜನತೆ ನೀಡಿದ ಬೆಂಬಲವಾಗಿದೆ ಎಂದು ಬಾಗಲಕೋಟ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಎ.ವಸಂತಕುಮಾರ ಹರ್ಷ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ 97000 ಮತಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಚುನಾವಣೆಯು ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ಎರಡು ವರ್ಷಗಳ ನಂತರದಲ್ಲಿ ನಡೆಯುವ ರಾಜ್ಯ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಮುನ್ನುಡಿಯಾಗಿದೆ, ರಾಜ್ಯದ ಜನತೆ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳಿಗೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಿಗೆ ನೀಡಿದ ಬೆಂಬಲವಾಗಿದೆ, 2028ರಲ್ಲಿಯೂ ಸಹ ಕಾಂಗ್ರೆಸ್ ಪಕ್ಷದ ಸರಕಾರವೇ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ ಎನ್ನುವದಕ್ಕೆ ಸಾಕ್ಷಿಯಾಗಿದೆ.
ಬಾಗಲಕೋಟ ವಿಧಾನಸಭಾ ಉಪಚುನಾವಣೆ ಗೆಲುವಿಗೆ ಬೆನ್ನೆಲುಬಾದ ಸಿಎಂ ಸಿದ್ದರಾಮಯ್ಯನವರು, ಡಿಸಿಎಂ ಡಿ.ಕೆ.ಶಿವಕುಮಾರವರು, ಹಗಲಿರುಳು ಶ್ರಮಿಸಿದ ಸಚಿವರಾದ ಸತೀಶ ಜಾರಕಿಹೊಳಿ, ಉಸ್ತುವಾರಿ ಸಚಿವರಾದ ಆರ್.ಬಿ.ತಿಮ್ಮಾಪುರ ಸೇರಿದಂತೆ ಎಲ್ಲಾ ಸಚಿವರು, ಶಾಸಕರು ಹಾಗೂ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Comments
Post a Comment