ಮಾವಿನ ಕೆರೆಗೆ ಜಿಲ್ಲಾಧಿಕಾರಿ ಎಸ್.ಪೂವಿತಾ ಭೇಟಿ ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

ಜಯ ಧ್ವಜ ನ್ಯೂಸ್ ,ರಾಯಚೂರು ಮೇ.14 - ರಾಯಚೂರು ನಗರದ ಐತಿಹಾಸಿಕ ಮಾವಿನಕೆರೆ ಪ್ರದೇಶಕ್ಕೆ ಜಿಲ್ಲಾಧಿಕಾರಿಗಳಾದ ಎಸ್.ಪೂವಿತಾ ಅವರು ಮೇ.13ರ ಬುಧುವಾರ ದಂದು ಭೇಟಿ ನೀಡಿ ಪರಿಶೀಲಿಸಿದರು.

ಕೆರೆ ಅಭಿವೃದ್ಧಿ ಕಾಮಗಾರಿಯ ವೀಕ್ಷಣೆ ನಡೆಸಿ, ಜಿಲ್ಲಾಧಿಕಾರಿ ಎಸ್.ಪೂವಿತಾ ಅವರು ಮಾತನಾಡಿ, ಕೆರೆ ಅಭಿವೃದ್ಧಿ ಕಾಮಗಾರಿಯನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕು. ಕಾಮಗಾರಿಗೆ ಯಾವುದೇ ಅಡೆತಡೆ ಬಂದರೆ ಕೂಡಲೇ ಜಿಲ್ಲಾಡಳಿತವನ್ನು ಸಂಪರ್ಕ ಮಾಡಬೇಕು ಹಾಗೂ ಕಾಮಗಾರಿಯನ್ನು ಗುಣಮಟ್ಟದಿಂದ ಮಾಡಬೇಕೆಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ನಂತರ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಂದ ಕೆರೆಯ ವಿಸ್ತರಣೆ ಮಾಹಿತಿಯನ್ನು ಪಡೆದರು. ಮಾವಿನಕೆರೆಗೆ ಬೇರೆ ಬೇರೆ ಕಡೆಗಳಿಂದ ಗಟಾರು ನೀರು ಕೆರೆಗೆ ಹರಿದು ಬರದಂತೆ ನೋಡಿಕೊಳ್ಳಬೇಕು. ಸಾರ್ವಜನಿಕರು ಕೆರೆಗೆ ಕಸ ಮತ್ತು ಪ್ಲಾಸ್ಟಿಕ್ ಎಸೆಯದಂತೆ ಜನರಲ್ಲಿ ಜಾಗೃತಿ ಮೂಡಿಸಬೇಕೆಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.


ಇದೇ ಸಂದರ್ಭದಲ್ಲಿ ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಕೆರೆ ಅಭಿವೃದ್ಧಿ ಮತ್ತು ಸಂರಕ್ಷಣಾಧಿಕಾರಿ ಆನಂದ ರೆಡ್ಡಿ, ಕೆರೆ ಇಂಜಿನಿಯರ್ ಬಸವರಾಜ ಸೇರಿದಂತೆ ಗುತ್ತೇದಾರರು, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Comments

Popular posts from this blog