ರಾಯಚೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪೂವಿತಾ ಎಸ್. ಅಧಿಕಾರ ಸ್ವೀಕಾರ: ಜನ ಪ್ರತಿನಿಧಿಗಳ, ಅಧಿಕಾರಿಗಳ ಸಹಕಾರದಿಂದ ಜಿಲ್ಲೆಯನ್ನು ಅಭಿವೃದ್ಧಿ ಪಡಿಸುತ್ತೇನೆ- ನೂತನ ಡಿಸಿ
ಜಯ ಧ್ವಜ ನ್ಯೂಸ್ ,ರಾಯಚೂರು. ಮೇ.6- ರಾಯಚೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪೂವಿತಾ ಎಸ್. ರವರು ಇಂದು ಸಂಜೆ ಅಧಿಕಾರ ಸ್ವೀಕರಿಸಿದರು. ನೂತನ ಜಿಲ್ಲಾಧಿಕಾರಿಗಳಿಗೆ ನಿರ್ಗಮಿತ ಜಿಲ್ಲಾಧಿಕಾರಿ ನಿತೀಶ್ ಕೆ. ಅವರು ಅಧಿಕಾರ ಹಸ್ತಾಂತರಿಸಿ ಶುಭ ಕೋರಿದರು.
ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪೂವಿತಾ ಎಸ್. ಅವರು ಐತಿಹಾಸಿಕ ರಾಯಚೂರು ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ಬಂದಿರುವುದಕ್ಕೆ ನನಗೆ ತುಂಭಾ ಹೆಮ್ಮೆಯಾಗುತ್ತಿದೆ. ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಮೊದಲ ಆಧ್ಯತೆ ನೀಡುವುದರ ಜೊತೆಗೆ ಹಿಂದಿನ ಜಿಲ್ಲಾಧಿಕಾರಿಯವರ ಕೆಲಸಗಳನ್ನು ಮುಂದುವರೆಸುತ್ತೇನೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನನ್ನ ಮೊದಲ ಆದ್ಯತೆಯಾಗಿದೆ. ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಸಹಕಾರವನ್ನು ಕೋರುತ್ತೆನೆ ಎಂದು ಹೇಳಿದರು.
ನೂತನ ಜಿಲ್ಲಾಧಿಕಾರಿ ಪೂವಿತಾ ಎಸ್. ಅವರು ಮೂಲತಃ ತಮಿಳು ನಾಡಿನ ರಾಜ್ಯದವರಾಗಿದ್ದು. 2016 ಕರ್ನಾಟಕ ಬ್ಯಾಚನ ಐ.ಎ.ಎಸ್. ಅಧಿಕಾರಿಯಾಗಿದ್ದು ಅವರು ಮೊದಲು ತಮ್ಮ ಪ್ರೊಬೇಷನರಿ ಅವಧಿಯನ್ನು ಉಡುಪಿಯಲ್ಲಿ ಮುಗಿಸಿ. ನಂತರ ತಿಪಟೂರಿನಲ್ಲಿ ಸಹಾಯಕ ಆಯುಕ್ತರಾಗಿ. ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಹಾಗೂ ಮೈಸೂರು ಆಡಳಿತ ತರಬೇತಿ ಸಂಸ್ಥೆಯಲ್ಲಿ ಜಂಟಿ ನಿರ್ದೆಶಕರಾಗಿ. ಚಾಮರಾಜನಗರ ಜಿಲ್ಲೆಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಮತ್ತು ಕೆಯುಐಡಿಎಫಸಿ ಬೆಂಗಳೂರಿನಲ್ಲಿ ಮ್ಯಾನೇಜಿಂಗ್ ಡ್ಯಾರೆಕ್ಟರ್ ಆಗಿ ಸೇವೆ ಸಲ್ಲಿಸಿದ ಅನುಭವ ಹೊಂದಿರುತ್ತಾರೆ.
ನೂತನ ಜಿಲ್ಲಾಧಿಕಾರಿಗಳ ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ, ಸಹಾಯಕ ಆಯುಕ್ತರಾದ ಹಂಪಣ್ಣ ಸಜ್ಜನ, ರಾಯಚೂರು ತಾಲ್ಲೂಕು ತಹಶಿಲ್ದಾರ ಸುರೇಶ ಮರ್ಮಾ ಸೇರಿದಂತೆ ಜಿಲ್ಲಾಡಳಿತ ಭವನದ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.



Comments
Post a Comment