ಜುಲೈ 11ರಂದು ರಾಷ್ಟ್ರೀಯ ಲೋಕ ಅದಾಲತ್ - ನ್ಯಾ.ಸಿದ್ದರಾಮಪ್ಪ ಕಲ್ಯಾಣರಾವ್


ಜಯ ಧ್ವಜ ನ್ಯೂಸ್ ರಾಯಚೂರು ಜೂ. 10 - ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ತಕ್ಷಣ ಇತ್ಯರ್ಥಪಡಿಸುವ ಸಲುವಾಗಿ ರಾಯಚೂರು ನಗರ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕು ನ್ಯಾಯಾಲಯಗಳಲ್ಲಿ ಜುಲೈ 11ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆಯಬೇಕೆಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಗೌರವಾನ್ವಿತ ಸಿದ್ದರಾಮಪ್ಪ ಕಲ್ಯಾಣರಾವ್ ಅವರು ತಿಳಿಸಿದರು

ಅವರಿಂದು ನಗರದ ಜಿಲ್ಲಾ ನ್ಯಾಯಾಲಯದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ  ಮಾತನಾಡಿದರು.

ಜುಲೈ 11ರ ಶನಿವಾರ ಬೆಳಿಗ್ಗೆ 10ಗಂಟೆಗೆ ಜಿಲ್ಲಾ ನ್ಯಾಯಾಲಯದಲ್ಲಿ ಹಾಗೂ ರಾಯಚೂರು ಜಿಲ್ಲೆಯ ಎಲ್ಲಾ ತಾಲ್ಲೂಕು ನ್ಯಾಯಾಲಯಗಳಲ್ಲಿ ರಾಷ್ಟಿçÃಯ ಲೋಕ ಅದಾಲತ್‌ನ್ನು ನಿಗದಿಪಡಿಸಲಾಗಿದೆ. ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಸಿವಿಲ್ ಮತ್ತು ಕ್ರೀಮಿನಲ್ (ರಾಜಿಯಾಗುವಂತಹ) ಮೊಕ್ಕದಮ್ಮೆಗಳನ್ನು, ಅಲ್ಲದೇ ಮೋಟಾರ ವಾಹನ ಕಾಯ್ದೆ, ಕುಟುಂಬ ನ್ಯಾಯಾಲಯದ ಪ್ರಕರಣಗಳು ಮತ್ತು ಎಲ್ಲಾ ಬಗೆಯ ಪ್ರಕರಣಗಳನ್ನು (ಕೇಸುಗಳನ್ನು) ಲೋಕ ಅದಾಲತ್ ಮುಖಾಂತರ ಇತ್ಯರ್ಥಗೊಳಿಸಲಾಗುತ್ತಿದ್ದು, ವಕೀಲರು, ಕಕ್ಷಿದಾರರು. ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು (ಕೇಸುಗಳನ್ನು) ರಾಷ್ಟಿçÃಯ ಲೋಕ ಅದಾಲತ್ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಸಾರ್ವಜನಿಕರಿಗೆ ಇದೊಂದು ಸದಾವಕಾಶವಾಗಿದೆ ಎಂದರು.

ಎಲ್ಲಾ ವಕೀಲರು, ಕಕ್ಷಿದಾರರು, ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯಪೂರ್ವ ಎಲ್ಲಾ ಬಗೆಯ ಕೇಸುಗಳನ್ನು ಲೋಕ ಅದಾಲತ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇತ್ಯರ್ಥಪಡಿಸಿಕೊಳ್ಳುವಂತೆ ಹೇಳಿದರು.

Comments

Popular posts from this blog