ನಾಳೆ ಮುನ್ನೂರು ಕಾಪು ಸಮಾಜದಿಂದ ಪಾರ್ವತಮ್ಮರವರ ಶ್ರದ್ಧಾಂಜಲಿ ಕಾರ್ಯಕ್ರಮ. ಜಯಧ್ವಜ ನ್ಯೂಸ್ ರಾಯಚೂರು, ಜೂ.18- ನಿನ್ನೆ ನಿಧನರಾದ ಮಾಜಿ ಶಾಸಕ ಎ.ಪಾಪಾರೆಡ್ಡಿರವರ ಧರ್ಮಪತ್ನಿ ಪಾರ್ವತಮ್ಮರವರ ಶ್ರದ್ಧಾಂಜಲಿ ಕಾರ್ಯಕ್ರಮ ಜೂ.19 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಗದ್ವಾಲ್ ರಸ್ತೆಯ ಮುನ್ನೂರು ಕಾಪು ವೀರಾಂಜನೇಯ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ. ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮುನ್ನೂರು ಕಾಪು ಸಮಾಜದ ಹಿರಿಯರು, ಮುಖಂಡರು, ಪದಾಧಿಕಾರಿಗಳು, ಸದಸ್ಯರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಅಗಲಿದ ಪಾರ್ವತಮ್ಮರವರ ಆತ್ಮಕ್ಕೆ ಶಾಂತಿ ಕೋರಬೇಕೆಂದು ಮುನ್ನೂರು ಕಾಪು ಸಮಾಜದ ಅಧ್ಯಕ್ಷರಾದ ಬೆಲ್ಲಂ ನರಸರೆಡ್ಡಿ ಪ್ರಕಟಣೆಯಲ್ಲಿ ಕೋರಿದ್ದಾರೆ.

Comments
Post a Comment