ಪರಿಸರ ಉಳಿದರೆ ನಾವು ಉಳಿಯುತ್ತೇವೆ - ವೆಂಕಟೇಶ ಬೇವಿನಬೆಂಚಿ
ಜಯ ಧ್ವಜ ನ್ಯೂಸ್ ,ರಾಯಚೂರು, ಜೂ.5- ಪ್ರಕೃತಿಯ ಎಲ್ಲಾ ಜೀವರಾಶಿಗಳ ಅಳಿವು ಉಳಿವು ಪರಿಸರದ ಮೇಲಿದೆ, ಪರಿಸರ ಉಳಿದರೆ ನಾವು ಉಳಿಯುತ್ತೇವೆ ಪರಸರ ನಾಶವಾದರೆ ಎಲ್ಲವೂ ನಾಶವಾಗುತ್ತದೆ ಎಂದು ಆಕಾಶವಾಣಿ ಕಾರ್ಯಕ್ರಮ ಮುಖ್ಯಸ್ಥ ವೆಂಕಟೇಶ ಬೇವಿನಬೆಂಚಿ ಹೇಳಿದರು.
ಅವರು ಇಂದು ಆಕಾಶವಾಣಿ ಆವರಣದಲ್ಲಿ ಪರಿಸರ ದಿನಾಚರಣೆ ಸಂದರ್ಭದಲ್ಲಿ ಗಿಡಗಳನ್ನು ನೆಡುವುದರ ಮೂಲಕ ಪರಿಸರ ದಿನಾಚರಣೆ ಆಚರಿಸಿ ಮಾತನಾಡಿದರು.
ಪರಿಸರವು ಇಂದು ತುಂಬಾ ಕಲುಷಿತವಾಗುತ್ತಿದೆ. ವಾಯು ಮಾಲಿನ್ಯ ಜಲ ಮಾಲಿನ್ಯ, ಶಬ್ದ ಮಾಲಿನ್ಯ, ಮತ್ತು ಮಣ್ಣು ಮಾಲಿನ್ಯ, ಈಗ ಪ್ಲಾಸ್ಟಿಕ್ ಮಾಲಿನ್ಯದಿಂದ ಪರಿಸರ ಸಮತೋಲನ ತಪ್ಪುತ್ತಿದೆ.
ಪರಿಸರ ಸಮತೋಲನ ಕಾಪಾಡದಿದ್ದರೆ ಮುಂದಿನ ಪೀಳಿಗೆಯನ್ನು ಉಳಿಸಲು ಸಾಧ್ಯವಾಗುವುದಿಲ್ಲ. ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪರಿಸರವನ್ನು ಹಾಳು ಮಾಡುತ್ತಿರುವ ಈ ವೇಳೆ ಪ್ರಜ್ಞಾವಂತರು ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ದೃಢ ಸಂಕಲ್ಪ ಮಾಡಬೇಕಾಗಿದೆ ಎಂದರು.
ತಾಂತ್ರಿಕ ವಿಭಾಗದ ಮುಖ್ಯಸ್ಥರಾದ ಅರವಿಂದಾಕ್ಷಣ ಮಾತನಾಡಿ ನಮ್ಮ ಆಕಾಶವಾಣಿಯಲ್ಲಿ ಉತ್ತಮ ಪರಿಸರವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ನಾವೆಲ್ಲ ಪ್ರಯತ್ನ ಮಾಡುತ್ತಿದ್ದೇವೆ. ಈ ದಿನ ಪರಿಸರ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗದೆ ಇದು ನಿರಂತರವಾಗಿ ನಡೆಯುವ ಪ್ರಕ್ರಿಯೆ ಆಗಬೇಕು ಎಂದರು. ಈ ಸಂದರ್ಭದಲ್ಲಿ ತಾಂತ್ರಿಕ ವಿಭಾಗದ ಎ.ಟಿ ಅರಸು, ಶರಣಬಸಪ್ಪ,ಕಾರ್ಯಕ್ರಮ ವಿಭಾಗದ ರಮಾಕುಲಕರ್ಣಿ, ನಾಗರತ್ನ, ಸುಮಾಲತಾ, ನರೇಂದ್ರ, ನಾಗರಾಜ ಸೇರಿದಂತೆ ಇತರರು ಇದ್ದರು.


Comments
Post a Comment