ದೇವಸೂಗೂರು ಗ್ರಾ.ಪಂ ಘನ ತ್ಯಾಜ್ಯ ವಿಲೇವಾರಿ ಘಟಕದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ:
ಒಂದು ಗಿಡವನ್ನು ನೆಟ್ಟು ಅದರ ಪೋಷಣೆ ಮಾಡುವ ಮೂಲಕ ಪರಿಸರ ಸಂರಕ್ಷಣೆ ಮಾಡಿ – ಜಿ.ಪಂ ಸಿಇಒ ಈಶ್ವರ್ ಕುಮಾರ ಕಾಂದೂ
ಜಯ ಧ್ವಜ ನ್ಯೂಸ್ ರಾಯಚೂರು . ಜೂ.5 ರಾಯಚೂರು ತಾಲೂಕಿನ ದೇವಸ್ಗೂರು ಗ್ರಾ.ಪಂ ಘನ ತ್ಯಾಜ್ಯ ವಿಲೇವಾರಿ ಘಟಕದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳೊಂದಿಗೆ ಜಿಲ್ಲಾ ಪಂಚಾಯತಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಈಶ್ವರ್ ಕುಮಾರ ಕಾಂದೂ ಅವರು ಗಿಡ ನೆಟ್ಟು ನೀರೆರೆವ ಮೂಲಕ ಅತ್ಯಂತ ಸಡಗರ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಂತರ ಮಾನ್ಯ ಸಿಇಒ ಅವರು ಮಾತನಾಡಿ ಪರಿಸರದ ಸಮತೋಲನ ಕಾಪಾಡಲು ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದರ ಪೋಷಣೆ ಜೊತೆಗೆ ಪರಿಸರ ಸಂರಕ್ಷಣೆಯು ನಮ್ಮೆಲ್ಲರ ಹೊಣೆಯಾಗಿದ್ದು, ಗಿಡಗಳು ಮನುಕುಲಕ್ಕೆ ಅಮೂಲ್ಯವಾದ ಆಸ್ತಿಯಾಗಿದೆ, ಶುದ್ಧ ಗಾಳಿ, ಮಳೆ ಹಾಗೂ ಜೀವ ವೈವಿಧ್ಯತೆಯ ಸಂರಕ್ಷಣೆಗೆ ಪ್ರಮುಖ ಪಾತ್ರವಹಿಸುತ್ತವೆ ಎಂದು ಅವರು ತಿಳಿಸಿದರು. ಇಂದಿನ ಶಾಲಾ ಮಕ್ಕಳೇ ಮುಂದಿನ ಉತ್ತಮ ನಾಯಕರಾಗಿದ್ದು, ಶಾಲಾ ಆವರಣದಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು, ನೆಟ್ಟ ಗಿಡಗಳ ಸಮರ್ಪಕ ನಿರ್ವಹಣೆ ಮತ್ತು ಸಂರಕ್ಷಣೆಗೆ ಎಲ್ಲರೂ ಬದ್ಧರಾಗಬೇಕು ಎಂದು ಕರೆ ನೀಡಿದರು.
ತದನಂತರ ಸ್ವಚ್ಛ ಸಂಕಿರಣ ಘಟಕ ಕ್ಕೆ ಭೇಟಿ ನೀಡಿ ಕಸ ವಿಲೇವಾರಿ ಮತ್ತು ವಿಂಗಡಣೆ ಕಾರ್ಯಗಳನ್ನು ವೀಕ್ಷಿಸಿ, ಸ್ವ ಸಹಾಯ ಸಂಘದ ಗುಂಪಿನ ಮಹಿಳೆಯರ ಜೊತೆ ಚರ್ಚಿಸಿ ಅವರ ಸಮಸ್ಯೆಯನ್ನು ಆಲಿಸಿದರೆ ಮತ್ತು ಅವರಿಗೆ ಸರಿಯಾದ ರೀತಿಯಲ್ಲಿ ಕಸ ಸಂಗ್ರಹಣೆ ಮತ್ತು ವಿಂಗಡಣೆ ಬಗ್ಗೆ ಜಾಗೂರಕರಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ಇನ್ನೂ ಜನರಲ್ಲಿ ಕಸದ ವಿಂಗಡಣೆ ಮತ್ತು ಘನತ್ಯಾಜ್ಯ ನಿರ್ವಹಣೆಯ ನಿಯಮಾವಳಿಗಳ ಬಗ್ಗೆ ಚರ್ಚಿಸಿ ಜನರಲ್ಲಿ ಜಾಗೃತಿ ಚಟುವಟಿಕೆಗಳನ್ನು ಕೈಗೊಳ್ಳಲು ಅಧಿಕಾರಿ ಸಿಬ್ಬಂದಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಶ್ರೀಮತಿ ವನಿತಾ ಆರ್.ಆರ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಚಂದ್ರಶೇಖರ ಪವಾರ್, ಯೋಜನಾಧಿಕಾರಿ ಶ್ರೀ ಪ್ರಶಾಂತ, ಸಹಾಯಕ ಸಂರಕ್ಷಣಾ ಅಧಿಕಾರಿ, ವಲಯ ಅರಣ್ಯ ಅಧಿಕಾರಿ, ಶಾಲೆಯ ವಿದ್ಯಾರ್ಥಿಗಳು ಮತ್ತು ಗ್ರಾ.ಪಂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.


Comments
Post a Comment