ರಕ್ತದಾನದ ಮಹತ್ವ ತಿಳಿಸುವ ಕಾರ್ಯವಾಗಲಿ- ಎಸ್ಪಿ ಅರುಣಾಂಗ್ಷು ಗಿರಿ


ಜಯ ಧ್ವಜ ನ್ಯೂಸ್ , ರಾಯಚೂರು, ಜೂನ್.16 - ಅಪಘಾತದಿಂದ ಹಾಗೂ ಕಾಯಿಲೆಯಿಂದ ಪ್ರಾಣಾಪಾಯದಲ್ಲಿ ಇರುವವರ ಜೀವ ಉಳಿಸಲು ರಕ್ತದಾನ ಮಹತ್ತರ ಪಾತ್ರ ವಹಿಸುತ್ತದೆ. ರಕ್ತದಾನ ಮಾಡಲು ಜನರು ಮುಂದೆ ಬರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ ಅವರು ಹೇಳಿದರು.

ಜೂನ್ 16ರ ಮಂಗಳವಾರ ದಂದು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆ ಮತ್ತು ನಿಯಂತ್ರಣ ಘಟಕ ರಾಯಚೂರು, ಲಯನ್ಸ್ ಕ್ಲಬ್, ರೆಡ್ ಕ್ರಾಸ್ ಸಂಸ್ಥೆ, ರೆಡ್ ರಿಬ್ಬನ್ ಕ್ಲಬ್, ಎನ್.ಎಸ್.ಎಸ್. ಎನ್.ಸಿ.ಸಿ, ರಾಯಚೂರು ಜಿಲ್ಲೆಯ ಎಲ್ಲ ರಕ್ತ ಕೇಂದ್ರಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ದೇಶದಾದ್ಯಂತ ಆಸ್ಪತ್ರೆಗಳಲ್ಲಿ ಪ್ರತಿದಿನ ಸೂಕ್ತ ಗುಂಪಿನ ರಕ್ತದ ಕೊರತೆಯಿಂದ, ಅಪಘಾತದಲ್ಲಿ ತೀವ್ರ ತರಹದ ಗಾಯದಿಂದ ರಕ್ತಸ್ರಾವವಾಗಿ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ರಕ್ತದಾನದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಮಾಹಿತಿ ಕೊರತೆ ಇದ್ದು, ರಕ್ತದಾನ ಮಾಡುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ರಕ್ತದಾನದಂತಹ ಮಹತ್ವಪೂರ್ಣ ಕಾರ್ಯದಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕು ಎಂದರು.

ರಕ್ತದಾನದಿAದ ಕೆಲವೇ ದಿನಗಳಲ್ಲಿ ಹೊಸ ರಕ್ತ ಉತ್ಪತ್ತಿಯಾಗಿ ರಕ್ತದೊತ್ತಡ, ಸಕ್ಕರೆ ಕಾಯಿಲೆಯಂತಹ ರೋಗಗಳು ದೂರವಾಗುತ್ತವೆ, ಹೊಸ ಚೈತನ್ಯ, ಉಲ್ಲಾಸ ಕಂಡುಬರುತ್ತದೆ, ಜನತೆಯಲ್ಲಿ ತಪ್ಪು ನಂಬಿಕೆ ಹಾಗೂ ತಿಳುವಳಿಕೆಯಿಂದ ಕೆಲವರು ಕೆಲವರು ರಕ್ತದಾನ ಮಾಡಲು ಮುಂದೆ ಬರುವುದಿಲ್ಲ. ಅಂತವರಿಗೆ ರಕ್ತದ ಅವಶ್ಯಕತೆ ಮಹತ್ವವನ್ನು ಮನವರಿಕೆ ಮಾಡಿ ರಕ್ತದಾನ ಮಾಡಲು ಶಿಬಿರಗಳನ್ನು ಏರ್ಪಡಿಸಬೇಕು ಎಂದರು.

ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು ಅವರು ಮಾತನಾಡಿ, ರಕ್ತಕ್ಕೆ ಪರ್ಯಾಯ ವಸ್ತುವಿಲ್ಲ. ಅದನ್ನು ಕೃತಕವಾಗಿ ತಯಾರಿಸಲೂ ಸಾಧ್ಯವಿಲ್ಲ. ವ್ಯಕ್ತಿಯು ಪ್ರತಿ ಮೂರು ತಿಂಗಳಿಗೊಮ್ಮೆ ಒಂದು ಬಾರಿಯಾದರೂ ರಕ್ತದಾನ ಮಾಡಿದಲ್ಲಿ ದೇಹದಲ್ಲಿ ಹೊಸ ರಕ್ತ ಉತ್ಪಾದನೆ ಆಗುವುದರೊಂದಿಗೆ ಹೃದಯಾಘಾತ, ಕ್ಯಾನ್ಸರ್, ಹೃದಯ ಸಂಬAಧಿ ರೋಗಗಳು ಸೇರಿದಂತೆ ವಿವಿಧ ಕಾಯಿಲೆಗಳಿಂದ ದೂರ ಉಳಿಯಬಹುದು ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಆರ್‌ಸಿಹೆಚ್‌ಓ ಡಾ.ನಂದಿತಾ ಎಮ್‌ಎನ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಮಹಮ್ಮದ್ ಶಾಕೀರ್ ಮೊಹಿಯುದ್ದೀನ್, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಗಣೇಶ್, ರಿಮ್ಸ್ ಭೋದಕ ಆಸ್ಪತ್ರೆ ಪ್ರಾಂಶುಪಾಲ ಡಾ.ರಾಹುಲ್ ಕೀರ್ತಿ, ನವೋದಯ ಕಾಲೇಜಿನ ಪ್ರಾಂಶುಪಾಲ ಡಾ.ಗುರುದತ್ತ ಪವಾರ್, ಎಎಮ್‌ಇ ಕಾಲೇಜಿನ ದಂತ ವಿಭಾಗದ ಮುಖ್ಯಸ್ಥರಾದ ಡಾ.ಸೋಮನಾಥ ರೆಡ್ಡಿ, ಡಾ.ಅರುಣಾ ಕುಮಾರಿ, ಎಪ್‌ಡಬ್ಲ್ಯುಓ ಡಾ.ಶಿವಕುಮಾರ್ ನಾರಾ, ಡಾ.ಜಹೀರ್, ಮಹಿಳಾ ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಡಾ.ಸಂತೋಷ್, ಡಿಹೆಚ್‌ಇಓ ಈಶ್ವರ ಹೆಚ್ ದಾಸಪ್ಪನವರ, ಡಿವೈಹೆಚ್‌ಇಓ ಬಸಯ್ಯ, ಡ್ಯಾಪ್ಕೋ ಮೆಲ್ವಿಚಾರಕರು ಮಲ್ಲಯ್ಯ ಮಠಪತಿ, ಸಿಪಿಓ ಬಸವರಾಜಪ್ಪಗೌಡ ಸೇರಿದಂತೆ ಇಲಾಖೆಯ ಸಿಬ್ಬಂದಿಯವರು, ವೈದ್ಯಕೀಯ ವಿಧ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಜಾಥಾವು ವಿವಿಧ ಘೋಷಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ಜರುಗಿತು.

Comments

Popular posts from this blog