ರಾಯಚೂರು ಜಿಲ್ಲಾ ಬ್ರಾಹ್ಮಣ ಮಹಾಸಭಾದಿಂದ:
ಜು.4 ರಂದು ವಿಪ್ರೋತ್ಸವ ಅಂಗವಾಗಿ ಪ್ರತಿಭಾ ಪುರಸ್ಕಾರ, ವಿಪ್ರಶ್ರೀ ಪ್ರಶಸ್ತಿ ಪ್ರದಾನ- ರಮೇಶ ಕುಲಕರ್ಣಿ
ಜಯ ಧ್ವಜ ನ್ಯೂಸ್ ,ರಾಯಚೂರು,ಜು.1- ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜು. 4ರಂದು ಸಂಜೆ 5ಗಂಟೆಗೆ ಜಿಲ್ಲಾ ಬ್ರಾಹ್ಮಣ ಮಹಾಸಭಾದ ವತಿಯಿಂದ ವಿಪ್ರೋತ್ಸವ-2026 ಅಂಗವಾಗಿ ಪ್ರತಿಭಾ ಪುರಸ್ಕಾರ ಹಾಗೂ ವಿಪಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಬ್ರಾಹ್ಮಣ ಮಹಾಸಭಾ ಜಿಲ್ಲಾ ಚುನಾಯಿತ ಪ್ರತಿನಿಧಿ ರಮೇಶ ಕುಲಕರ್ಣಿ ತಿಳಿಸಿದರು.
ಅವರಿಂದು ಪತ್ರಿಕಾಗೋಷ್ಠಿಯಲ್ಲಿ ಮಾಣನಾಡಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳಲ್ಲಿ ಶೇ.75ಕ್ಕಿಂತ ಹೆಚ್ಚು ಅಂಕ ಪಡೆದ 120 ವಿಪ್ರ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುತ್ತಿದೆ ಎಂದರು. ಸಮಾಜ ಸೇವೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಮಾಜಿಕ ಹೋರಾಟಗಾರ ರಾಘವೇಂದ್ರ ಕುಷ್ಟಗಿ ಮತ್ತು ಮಹಿಳಾ ವಿಭಾಗದಲ್ಲಿ ಸಾಧಕರಾದ ಉಷಾಬಾಯಿ ಶ್ರೀನಿವಾಸರಾವ್ ದೇಸಾಯಿ ಕಡದಿನ್ನಿ ಅವರಿಗೆ ವಿಪ್ರಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದರು.
ಎಂಬಿಎ ಪದವಿಯಲ್ಲಿ ನಾಲ್ಕನೇ ರ‍್ಯಾಂಕ್ ಪಡೆದ ಲಕ್ಷ್ಮೀ ಪ್ರಾಣೇಶ ಜೋಶಿ, ಹಿಂದಿ ಭಾಷೆಯಲ್ಲಿ ಪಿಎಚ್‌ಡಿ ಪದವಿ ಪಡೆದ ವಂದನಾ ರಂಗನಾಥ ಕೆ, ಡಾ.ರಮ್ಯ ವಿನಯ ತಂದೆ ಡಾ.ಪ್ರಮೋದಕಟ್ಟಿ ಅವರಿಗೆ ವಿಶೇಷ ಸನ್ಮಾನ ನಡೆಯಲಿದೆ ಎಂದರು.
ಕಾರ್ಯಕ್ರಮ ಉದ್ಘಾಟನೆಯನ್ನು ಮಾಜಿ ಸಚಿವ ದಿನೇಶ ಗುಂಡುರಾವ್ ನೆರವೇರಿಸಲಿದ್ದು ,ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಜಂಟಿ ಕಾರ್ಯದರ್ಶಿ ರಮೇಶ ಕುಲಕರ್ಣಿ ವಹಿಸಲಿದ್ದಾರೆ ಎಂದರು.
ಮಾಜಿ ಸಚಿವ ಎನ್.ಎಸ್.ಬೋಸರಾಜ, ಲೋಕಸಭಾ ಸದಸ್ಯ ಜಿ.ಕುಮಾರನಾಯಕ, ನಗರ ಕ್ಷೇತ್ರದ ಶಾಸಕರಾದ ಡಾ.ಶಿವರಾಜ ಪಾಟೀಲ್, ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ ಅಧ್ಯಕ್ಷ ಹಾಗೂ ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಎಸ್.ರಘುನಾಥ, ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಅಸುಗೋಡು ಜಯಸಿಂಹ, ಜಿಲ್ಲಾ ಬ್ರಾಹ್ಮಣ ಮಹಾಸಬಾ ಮಹಾ ಪೋಷಕ ನರಸಿಂಗರಾವ್ ದೇಶಪಾಂಡೆ, ಸುಯಮೀಂದ್ರ ಕುಲಕರ್ಣಿ, ವೇಣುಗೋಪಾಲ ಇನಾಂದಾರ, ಕಾರ್ಯಾಧ್ಯಕ್ಷ ವೆಂಕಟೇಶ ದೇಸಾಯಿ ಸೇರಿದಂತೆ ಅನೇಕ ಗಣ್ಯರು ಆಗಮಿಸಲಿದ್ದಾರೆ ಎಂದರು. ಮುಖ್ಯ ಭಾಷಣಕಾರರಾಗಿ ರೋಹಿತ ಚಕ್ರವರ್ತಿ ಆಗಮಿಸಲಿದ್ದಾರೆ ಎಂದ ಅವರು ಸಮಾಜ ವಿದ್ಯಾರ್ಥಿಗಳು, ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕೋರಿದರು.
ಈ ಸಂದರ್ಭದಲ್ಲಿ ಮಹಾ ಪೋಷಕರಾದ ನರಸಿಂಗರಾವ್ ದೇಶಪಾಂಡೆ, ಪ್ರಾಣೇಶ ಮುತಾಲಿಕ, ವೇಣುಗೋಪಾಲ ಇನಾಂದಾರ, ರಾಮರಾವ್ ಗಣೇಕಲ್, ಎ. ಸುಧೀರ, ಶ್ರೀನಿವಾಸ ದೇಸಾಯಿ, ವಿಜೇಂದ್ರ ಸಿರವಾರ್ ಇದ್ದರು.




Comments
Post a Comment