ಮಾಜಿ ಶಾಸಕ ಸೈಯದ್ ಯಾಸೀನ್ ನಿಧನ. ಜಯ ಧ್ವಜ ನ್ಯೂಸ್ , ರಾಯಚೂರು,ಜು.12- ಮಾಜಿ ಶಾಸಕ ಸೈಯದ ಯಾಸೀನ(74 )ಅವರು ಅನಾರೋಗ್ಯದ ಕಾರಣ ಇಂದು ಬೆಳಿಗ್ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಸೈಯದ ಯಾಸೀನ ಅವರು ಪತ್ನಿ, ನಾಲ್ಕು ಜನ ಗಂಡು ಮಕ್ಕಳು ಹಾಗೂ ಅಪಾರ ಬಂದು, ಬಳಗ, ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ.
ಸೈಯದ ಯಾಸೀನ ಅವರು ಕೇಂದ್ರದ ಮಾಜಿ ಸಚಿವ ಸಿ.ಕೆ. ಜಾಫರ್ ಷರೀಫ ಅವರ ಅಳಿಯರಾಗಿದ್ದು, ರಾಯಚೂರು ನಗರ ವಿಧಾನಸಭಾ ಕ್ಷೇತ್ರದಿಂದ ಆರು ಸಲ ಸ್ಪರ್ಧಿಸಿದ್ದರು, ರಾಯಚೂರು ನಗರ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಅಯ್ಕೆಯಾಗಿದ್ದರು, 1999 ಹಾಗೂ 2008ರಲ್ಲಿ ಶಾಸಕರಾಗಿ ಅಯ್ಕೆಯಾಗಿದ್ದರು.
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿಯೂ ಸೇವೆಸಲ್ಲಿಸಿದ್ದರು, ಕೆಪಿಸಿಸಿಯ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಅಧ್ಯಕ್ಷರಾಗಿ ಪಕ್ಷ ಸಂಘಟನೆಯ ಜವಾಬ್ದಾರಿಯು ಸಹ ನಿರ್ವಹಿಸಿದ್ದರು.
ಅವರ ಅಂತ್ಯಕ್ರಿಯೆ ನಗರದ ಕಮಲಿವಾಲೆ ಬಾಬಾ ಕಬರಸ್ಥಾನದಲ್ಲಿ ನಾಳೆ ಮಧ್ಯಾಹ್ನ ನೆರವೇರಲಿದೆ ಎಂದು ಕುಟುಂಬ ಮೂಲಗಳು ಪ್ರಕಟಣೆಯಲ್ಲಿ ತಿಳಿಸಿವೆ.

Comments
Post a Comment