ಓಪೆಕ್ ಆಸ್ಪತ್ರೆಗೆ ಜಿಲ್ಲಾಧಿಕಾರಿಗಳ ಭೇಟಿ ವಿವಿಧ ವಿಭಾಗಗಳ ಪರಿಶೀಲನೆ
ಜಯ ಧ್ವಜ ನ್ಯೂಸ್ , ರಾಯಚೂರು ,ಜು.23- ಜಿಲ್ಲಾಧಿಕಾರಿ ಪೂವಿತಾ ಎಸ್. ಅವರು ಇಂದು ನಗರದಲ್ಲಿರುವ ಓಪೆಕ್ ಆಸ್ಪತ್ರೆಗೆ ಭೇಟಿ ನೀಡಿ ವಿವಿಧ ವಿಭಾಗಗಳ ಪರಿಶೀಲನೆ ನಡೆಸಿದರು. ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವ ವಿವಿಧ ವಿಭಾಗಗಳಾದ ಕಾರ್ಡಿಯಾಲಜಿ. ಕಿಮೋ ಥೆರಫಿ. ಡಯಾಲಿಸಸ್ ಕ್ಯಾಥಲ್ಯಾಬ್ ಸ್ಕ್ಯಾನಿಂಗ್ ಸೆಂಟರ್, ಟ್ರಾಮಾ ಕೇರ್ ಸೇರಿದಂತೆ ಇತರೆ ವಿಭಾಗಗಳ ಪರಿಶೀಲನೆ ನಡೆಸಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸರಿಯಾದ ರೀತಿಯಲ್ಲಿ ಚಿಕಿತ್ಸೆ ನೀಡಬೇಕು ಮತ್ತು ಆಸ್ಪತ್ರೆಗೆ ಅವಶ್ಯಕತೆ ಇರುವ ಉಪಕರಣಗಳ ಪಟ್ಟಿ ನೀಡುವಂತೆ ಆಸ್ಪತ್ರೆಯ ನಿರ್ದೇಶಕರಿಗೆ ಸೂಚಿಸಿದರು.
ಓಫೆಕ್ ಆಸ್ಪತ್ರೆಗೆ ಬಂದ ರೋಗಿಗಳ ಆರೋಗ್ಯ ವಿಚಾರಿಸಿದ ಅವರು ಚಿಕಿತ್ಸೆ ಹೇಗೆ ನೀಡುತ್ತಿದ್ದಾರೆ ಎಂದು ಅವರಿಂದ ಮಾಹಿತಿ ಪಡೆದು ಆಸ್ಪತ್ರೆಯಲ್ಲಿ ಸ್ವಚ್ಚತೆ ಕಾಪಾಡುವಂತೆಯು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಓಫೆಕ್ ಆಸ್ಪತ್ರೆಯ ನಿರ್ದೇಶಕರಾದ ರಮೇಶ್ ಸೇರಿದಂತೆ ಆಸ್ಪತ್ರೆಯ ಇತರೆ ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.



Comments
Post a Comment