ವಾರ್ತಾ ಇಲಾಖೆಯಲ್ಲಿ ಪ್ರಕಾಶ್ ಅವರಿಂದ ಉತ್ತಮ ಕೆಲಸ ನಿರ್ವಹಣೆ- ಜಿ.ಸುರೇಶ


ಜಯ ಧ್ವಜ ನ್ಯೂಸ್ ,ರಾಯಚೂರು ಜು.31- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸಿನಿ ಆಪರೇಟರ್ ಹುದ್ದೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಎ.ಪ್ರಕಾಶ್ ಅವರು ಇಂದು ವಯೋನಿವೃತ್ತಿ ಹೊಂದಿದರು. ಈ ಹಿನ್ನೆಲೆಯಲ್ಲಿ ಇಲಾಖೆಯ ವತಿಯಿಂದ ಆಯೋಜಿಸಲಾದ ಬೀಳ್ಕೊಡುಗೆ ಸಮಾರಂಭದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ, ಪತ್ರಕರ್ತರು ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಶುಭ ಹಾರೈಸಲಾಯಿತು.

ಸಮಾರಂಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಜಿ.ಸುರೇಶ್ ಅವರು ಮಾತನಾಡಿ, ನಿವೃತ್ತರು ತಮ್ಮ ಸೇವಾ ಅವಧಿಯಲ್ಲಿ ಪ್ರಾಮಾಣಿಕತೆ, ಕರ್ತವ್ಯ ನಿಷ್ಠೆ ಮತ್ತು ಶಿಸ್ತುಬದ್ಧ ಕಾರ್ಯನಿರ್ವಹಣೆಯ ಮೂಲಕ ಇಲಾಖೆಯಲ್ಲಿ ಉತ್ತಮ ಕೆಲಸ ನಿರ್ವಹಣೆ ಮಾಡಿದ್ದಾರೆ. ಅವರ ಸೇವೆ ಸಹೋದ್ಯೋಗಿಗಳಿಗೆ ಸದಾ ಮಾದರಿಯಾಗಿದ್ದು, ನಿವೃತ್ತಿಯ ನಂತರವೂ ಉತ್ತಮ ಆರೋಗ್ಯ, ಸುಖ-ಶಾಂತಿ ಹಾಗೂ ನೆಮ್ಮದಿಯ ಜೀವನ ಸಾಗಿಸಲಿ ಎಂದು ಶುಭಕೋರಿದರು.

ಈ ವೇಳೆ ವಯೋ ನಿವೃತ್ತರಾದ ಎ.ಪ್ರಕಾಶ್ ಅವರು ಮಾತನಾಡಿ, ಸೇವಾ ಅವಧಿಯಲ್ಲಿ ಸಹಕರಿಸಿದ ಎಲ್ಲಾ ಅಧಿಕಾರಿಗಳು, ಸಹೋದ್ಯೋಗಿಗಳು ಹಾಗೂ ಸಿಬ್ಬಂದಿಗಳಿಗೆ, ಪತ್ರಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ಅನುಭವವನ್ನು ಸ್ಮರಿಸಿಕೊಂಡ ಅವರು, ತಮ್ಮ ಸೇವಾ ಜೀವನದ ನೆನಪುಗಳನ್ನು ಹಂಚಿಕೊAಡರು.

ಈ ಸಂದರ್ಭದಲ್ಲಿ ಇಲಾಖೆಯ ವತಿಯಿಂದ ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಈ ವೇಳೆ ರಾಯಚೂರಿನ ವಿವಿಧ ಪತ್ರಿಕೆಗಳ ಸಂಪಾದಕರು ಹಾಗೂ ಪತ್ರಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಎ.ಪ್ರಕಾಶ್ ಅವರ ಸೇವೆಯ ಕುರಿತು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

 ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ಆರ್.ಗುರುನಾಥ, ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಅಧ್ಯಕ್ಷ ವಿಜಯಕುಮಾರ್ ಜಾಗಟಗಲ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿಯ ಸದಸ್ಯರಾದ ಬಸವರಾಜ ನಾಗಡದಿನ್ನಿ, ಅರವಿಂದ್ ಕುಲಕರ್ಣಿ, ಹಿರಿಯ ಪತ್ರಕರ್ತರರಾದ ಶಿವಮೂರ್ತಿ ಹಿರೇಮಠ, ರಾಯಚೂರು ಜಿಲ್ಲೆಯ ವಿವಿಧ ಪತ್ರಿಕೆಗಳ ಸಂಪಾದಕರಾದ ಚನ್ನಬಸವ ಬಾಗಲವಾಡ, ವೀರರೆಡ್ಡಿ, ಸುಶೀಲೇಂದ್ರ  ಸೋದೆಗಾರ್, ಶಿವರಾಜ, ಮಹದಾನಂದ ನಾಯಕ, ವಾರ್ತಾ ಇಲಾಖೆಯ ಸಿಬ್ಬಂದಿಗಳಾದ ನರೇಶ, ರಮೇಶ ಗೌಡೂರು, ಅಬ್ಬಾಸ್ ಖಾನ್, ಮಹಮ್ಮದ್ ಅಜರ್ ಉಲ್ ಹಕ್, ಅಂಬ್ರೇಶ್ ಸೇರಿದಂತೆ   ದೃಶ್ಯ, ಮುದ್ರಣ ಮಾಧ್ಯಮದ ಪ್ರತಿನಿಧಿಗಳು,  ಸಾರ್ವಜನಿಕರು ಇದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹ ಕಾರ್ಯದರ್ಶಿಯಾದ ಡಾ.ದಂಡಪ್ಪ ಬಿರಾದಾರ್ ಅವರು ನೆರವೇರಿಸಿದರು.

Comments

Popular posts from this blog