ಪ್ರೊ.ಶಿವಾನಂದ ಕೆಳಗಿನಮನಿರವರಿಗೆ ಮೇಘಾಲಯ ರಾಜ್ಯಪಾಲರಿಂದ ಪ್ರಶಸ್ತಿ ಪ್ರದಾನ


ಜಯ ಧ್ವಜ ನ್ಯೂಸ್ , ರಾಯಚೂರು,ಜು.13-

ಜನಶಕ್ತಿ ವಿಶ್ವಸ್ಥ ಮಂಡಳಿ ಲೋಕ ಧ್ವನಿ ‘ನಮ್ಮ ಹೆಮ್ಮೆಯ ಸಾಧಕರು ಪ್ರಶಸ್ತಿ’ಗೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಶಿವಾನಂದ ಕೆಳಗಿನಮನಿ ಅವರು ಆಯ್ಕೆಯಾಗಿದ್ದು, ಇದೇ ಜುಲೈ ೧೧ ರಂದು ಶನಿವಾರ ಶಿಲ್ಲಾಂಗ್‌ನ ಲೋಕಭವನದಲ್ಲಿ ಹಮ್ಮಿಕೊಂಡಿದ್ದ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮೇಘಾಲಯ ರಾಜ್ಯಪಾಲರಾದ ಸಿ.ಎಚ್.ವಿಜಯಶಂಕರ್ ಅವರು ಕುಲಪತಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಕುಲಪತಿಗಳಾದ ಪ್ರೊ.ಶಿವಾನಂದ ಕೆಳಗಿನಮನಿ ಅವರಿಗೆ ಪ್ರಶಸ್ತಿ ಒಲಿದಿರುವುದಕ್ಕೆ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ಎ.ಚನ್ನಪ್ಪ, ಕುಲಸಚಿವರು(ಮೌಲ್ಯಮಾಪನ) ಪ್ರೊ.ಜ್ಯೋತಿ ಧಮ್ಮ ಪ್ರಕಾಶ್, ಹಣಕಾಸು ಅಧಿಕಾರಿ, ಉಪಕುಲಸಚಿವರು, ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರು, ವಿವಿಧ ವಿಭಾಗಗಳ ನಿಕಾಯ ಡೀನರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿ ಸಂತಸ ವ್ಯಕ್ತಪಡಿಸಿದ್ದಾರೆ.

Comments

Popular posts from this blog