ಸಂಸದ ಗೋವಿಂದ ಕಾರಜೋಳ ಬಗ್ಗೆ ಅವಹೇಳನಕಾರಿ ಪೋಸ್ಟರ್ ಕ್ರಮಕ್ಕೆ ರವೀಂದ್ರ ಜಲ್ದಾರ್ ಪೊಲೀಸರಿಗೆ ಒತ್ತಾಯ

 ಜಯ ಧ್ವಜ ನ್ಯೂಸ್, ರಾಯಚೂರು,ಜು.25-

ಸಾಮಾಜಿಕ ಜಾಲತಾಣಗಳಲ್ಲಿ  ಚಿತ್ರದುರ್ಗ ಸಂಸದರ  ವಿರುದ್ಧ ಹಾಗೂ ಬಿಜೆಪಿ ಪಕ್ಷದ ಬಗ್ಗೆ ಅವಹೇಳನಕಾರಿ , ಮಾನಹಾನಿಕರ ಹಾಗೂ ಸಾರ್ವಜನಿಕ ಶಾಂತಿ ಕದಡುವ ಉದ್ದೇಶದ ಪೋಸ್ಟ್ ಗಳನ್ನು ಪ್ರಕಟಿಸಿರುವ ಪಾವಗಡ ಮೂಲದ ಶ್ರೀನಿವಾಸ್ ಬಾಬು ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ರವೀಂದ್ರ ಜಲ್ದಾರ್  ಮನವಿ ಪತ್ರಿ ಸಲ್ಲಿಸಿದರು.

  ಪಾವಗಡ ತಾಲ್ಲೂಕಿನ ಶ್ರೀನಿವಾಸ್ ಬಾಬು ಎಂಬ ವ್ಯಕ್ತಿಯು , ಚಿತ್ರದುರ್ಗ ಲೊಕಸಭಾ ಸಂಸದರಾದ ಶ್ರೀ ಗೋವಿಂದ್ ಕಾರಜೋಳ ಅವರ ವಿರುದ್ಧ ನಿರಂತರವಾಗಿ ಅವಹೇಳನಕಾರಿ , ಮಾನಹಾನಿಕರ ಹಾಗೂ ಗೌರವಕ್ಕೆ ದಕ್ಕೆ ತರುವ ರೀತಿಯ ಪೋಸ್ಟ್ ಗಳನ್ನು ಪ್ರಕಟಿಸುತ್ತಿದ್ದಾರೆಂದು ದೂರಿದ ಅವರು ದೇಶದ ಪ್ರಮುಖ ರಾಷ್ಟ್ರೀಯ ಪಕ್ಷವಾದ ಭಾರತೀಯ ಜನತಾ ಪಕ್ಷವನ್ನು ಉದ್ದೇಶಪೂರ್ವಕವಾಗಿ "ಬ್ಲೂ ಜೆಪಿ" ಎಂಬ ಅವಹೇಳನಕಾರಿ ಪದ ಮತ್ತು ನಮ್ಮ ಪಕ್ಷದ ಕಾರ್ಯಕರ್ತರನ್ನು "ದಲ್ಲಾಳಿಗಳು" ಎಂಬ ಪದಗಳನ್ನು ಬಳಸಿ ನಿಂದಿಸುತಿದ್ದು, ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರ ಭಾವನೆಗಳಿಗೆ ದಕ್ಕೆ  ಉಂಟಾಗುತ್ತಿದೆ ಇಂತಹ ಪೋಸ್ಟ್ಗಳು ಸಾರ್ವಜನಿಕರಲ್ಲಿ ದ್ವೇಷ, ವೈಮನಸ್ಸು ಮತ್ತು ಉದಿಗ್ನತೆ ಉಂಟು ಮಾಡುವ ಸಾಧ್ಯತೆ ಇದ್ದು , ಕಾನೂನು ಮತ್ತು ಸುವ್ಯವಸ್ಥೆಗೆ ದಕ್ಕೆ ತರುವಂತಿದೆ.


ಪ್ರಜಾಪ್ರಭುತ್ವದಲ್ಲಿ ಟೀಕೆ ಮಾಡುವ ಹಕ್ಕು ಪ್ರತಿಯೊಬ್ಬರಿಗೂ ಇದ್ದರೂ ಸುಳ್ಳು , ಮಾನಹಾನಿಕರ ಹಾಗೂ ಪ್ರಚೋದನಾತ್ಮಕ ಮಾಹಿತಿಯನ್ನು ಹರಡುವ ಹಕ್ಕು ಯಾರಿಗೂ ಇಲ್ಲ. ಇಂತಹ ಕೃತ್ಯಗಳು ಮಾಹಿತಿ ತಂತ್ರಜ್ಞಾನ ಕಾಯಿದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ  ಸಂಬಂಧಿತ ವಿಧಿಗಳ ಅಡಿಯಲ್ಲಿ ಅಪರಾಧವಾಗಬಹುದು.

ಆದ್ದರಿಂದ ಈ ಪ್ರಕರಣವನ್ನು   ಅತ್ಯಂತ ಗಂಭೀರವಾಗಿ ಪರಿಗಣಿಸಿ

ಶ್ರೀನಿವಾಸ್ ಬಾಬು ವಿರುದ್ಧ ತಕ್ಷಣವೇ ಪ್ರಕರಣ ದಾಖಲಿಸಬೇಕು ಅವರು ಪ್ರಕಟಿಸಿರುವ ಎಲ್ಲ ಸಾಮಾಜಿಕ ಜಾಲತಾಣದ ಪೋಸ್ಟ್ ಗಳನ್ನು ಪರಿಶೀಲಿಸಿ ಡಿಜಿಟಲ್ ಸಾಕ್ಷ್ಯಗಳನ್ನು ಸಂರಕ್ಷಿಸಬೇಕು.ಅಗತ್ಯವಿದ್ದಲ್ಲಿ ಅವರ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣ ಖಾತೆಗಳ ತನಿಖೆ ನಡೆಸಬೇಕು.ಸಾರ್ವಜನಿಕ ಶಾಂತಿ ಭಂಗಪಡಿಸುವ  ಹಾಗೂ ದ್ವೇಷ ಪ್ರಚೋದಿಸುವ ಕೃತ್ಯಗಳಿಗೆ ಸಂಬಂಧಿಸಿದಂತೆ ಕಾನೂನುಬದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಕಾನೂನು ಬಾಹಿರ ಹಾಗೂ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಕೃತ್ಯಗಳನ್ನು ತಡೆಯಲು ಅಗತ್ಯ ಕ್ರಮ ಜರುಗಿಸಬೇಕು.

ಕಾನೂನಿನ ಮುಂದೆ ಎಲ್ಲರೂ ಸಮಾನರು.ಆದ್ದರಿಂದ ಈ ದೂರಿನ ಕುರಿತು ಯಾವುದೇ ವಿಳಂಬ ಮಾಡದೆ ಸೂಕ್ತ ತನಿಖೆ ನಡೆಸಿ ,ತಪ್ಪಿತಸ್ಥನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರ ಜಲ್ದಾರ್ ಅವರು ನಿನ್ನೆ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಕ್ರಮ ಕೈಗೊಳ್ಳಲು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಯಚೂರು ಜಿಲ್ಲಾಧ್ಯಕ್ಷರಾದ ವೀರನಗೌಡ ಲೆಕ್ಕಿಹಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ್ ರಾಜಗುರು, ನಗರಸಭೆ ಮಾಜಿ ಸದಸ್ಯ ಹಾಗೂ ಬಿಜೆಪಿ ಎಸ್ಸಿ ಮೋರ್ಚಾ ಮಾಜಿ ನಗರ ಅಧ್ಯಕ್ಷ ಮಂಚಲ್ ಭೀಮಣ್ಣ, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಜೆ.ಎಂ. ಮೌನೇಶ್  ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Comments

Popular posts from this blog