ಹೊಕ್ರಾಣಿ ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ಥರಿಗೆ ಸಾಂತ್ವನ ಹೇಳಿದ ರವಿ ಬೋಸರಾಜು
ಎನ್ಎಸ್ ಬೋಸರಾಜು, ಹಂಪಯ್ಯ ನಾಯಕರಿಂದ ಸಂತ್ರಸ್ತ ಕುಟುಂಬಕ್ಕೆ ₹2 ಲಕ್ಷ ರೂ. ನೆರವು
ಜಯ ಧ್ವಜ ನ್ಯೂಸ್ ,ರಾಯಚೂರು,ಆ.20-
ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿದ್ದಾರೆ ಎನ್ನಲಾದ ಯುವತಿಯ ಕುಟುಂಬಕ್ಕೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಮತ್ತು ಶಾಸಕ ಹಂಪಯ್ಯ ನಾಯಕ್ ಅವರ ಪರವಾಗಿ ಕಾಂಗ್ರೆಸ್ ರಾಜ್ಯ ಯುವ ಮುಖಂಡ ರವಿ ಬೋಸರಾಜು ಅವರು ₹2 ಲಕ್ಷ ಆರ್ಥಿಕ ನೆರವು ನೀಡಿದರು.
ಬೆಂಗಳೂರಿನಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎನ್.ಎಸ್. ಬೋಸರಾಜು ಹಾಗೂ ಶಾಸಕ ಹಂಪಯ್ಯ ನಾಯಕ್ ಅವರು ಖುದ್ದಾಗಿ ಗ್ರಾಮಕ್ಕೆ ಬರಲು ಸಾಧ್ಯವಾಗದ ಕಾರಣ, ಪ್ರಕರಣ ಸುದ್ದಿ ತಿಳಿಯುತ್ತಿದ್ದಂತೆಯೇ ಅವರ ಪರವಾಗಿ ರವಿ ಬೋಸರಾಜು ಅವರು ಒಕ್ರಾಣಿ ಗ್ರಾಮಕ್ಕೆ ತೆರಳಿ ಸಂತ್ರಸ್ತ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.
ಕುಟುಂಬದವರಿಗೆ ಸಾಂತ್ವನ ಹೇಳಿ ಮಾತನಾಡಿದರ ಅವರು,
“ಅಶ್ವಿನಿ ಅವರ ಕುಟುಂಬದ ನೋವು ಮತ್ತು ದುಃಖವನ್ನು ಅರ್ಥಮಾಡಿಕೊಳ್ಳುವುದು ಕಷ್ಟ ಆ ಭಗವಂತ ಅಶ್ವಿನಿ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ.“ಅಶ್ವಿನಿ ಸಾವಿಗೆ ನ್ಯಾಯ ದೊರಕಬೇಕು. ಘಟನೆಗೆ ಕಾರಣರಾದವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು.
ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಬೇಕು. ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ತನಿಖೆ ಪೂರ್ಣಗೊಳಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕು” ಎಂದು ಅವರು ಒತ್ತಾಯಿಸಿದರು.



Comments
Post a Comment