ಮಂಕಾಳ ವೈದ್ಯರವರನ್ನು ಸಂಪುಟಕ್ಕೆ ಸೇರಿಸಿಕೊಳ್ಳದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ನಷ್ಟ- ಶರಣಪ್ಪ. ಜಯ ಧ್ವಜ ನ್ಯೂಸ್ , ರಾಯಚೂರು,ಆ.11- ಮಂಕಾಳ ವೈದ್ಯರನ್ನು ಸಂಪುಟಕ್ಕೆ ಸೇರಿಸಿಕೊಳ್ಳದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಮುಂಬರುವ ಚುನಾವಣೆಯಲ್ಲಿ ನಷ್ಟವಾಗಲಿದೆ ಎಂದು ಜಿಲ್ಲಾ ಗಂಗಾಮತಸ್ಥ ಸಮಾಜ ಮಾಜಿ ಕಾರ್ಯದರ್ಶಿ ಶರಣಪ್ಪ ಕಡುಗೋಲು ಹೇಳಿದರು. ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರಾಜ್ಯದಲ್ಲಿ ಸುಮಾರು 60 ಲಕ್ಷದಷ್ಟು ಜನಸಂಖ್ಯೆಯಿರುವ ದೊಡ್ಡ ಸಮಾಜದ ಪ್ರತಿನಿಧಿಸುವ ಕಾಂಗ್ರೆಸ್ ಪಕ್ಷದ ಏಕೈಕ ವಿಧಾನಸಭೆ ಶಾಸಕ ರಾಗಿರುವ ಮಂಕಾಳು ವೈದ್ಯರನ್ನು ಸಿಎಂ ಡಿಕೆ ಶಿವಕುಮಾರ್ ಸಂಪುಟ ವಿಸ್ತರಣೆ ವೇಳೆ ಮೊದಲ ಪಟ್ಟಿಯಲ್ಲಿ ಹೆಸರು ಸೇರಿಸಿ ತದನಂತರ ಕೊನೆ ಕ್ಷಣದಲ್ಲಿ ಕೈಬಿಟ್ಟಿದ್ದು ಗಂಗಾಮತಸ್ಥ ಸಮಾಜಕ್ಕೆ ತುಂಬಾ ಅನ್ಯಾಯವಾದಂತಾಗಿದೆ ಎಂದರು.
ಕಲ್ಬುರ್ಗಿ ಜಿಲ್ಲೆಯಲ್ಲಿ ನಮ್ಮ ಸಮಾಜದ ಹೆಚ್ಚಿನ ಬೆಂಬಲದಿಂದಲೇ ಪ್ರಿಯಾಂಕ ಖರ್ಗೆ ಆಯ್ಕೆಯಾಗಿದ್ದಾರೆ ನಮ್ಮ ಸಮಾಜಕ್ಕೆ ಸಚಿವ ಸ್ಥಾನ ಸಿಗದಿದ್ದರೆ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ, ತಿಮ್ಮಪ್ಪ, ನರಸಿಂಹಲು, ರಾಮು, ಈರಣ್ಣ, ಹನಮಂತು ಇದ್ದರು.


Comments
Post a Comment