ಜಿಲ್ಲೆಯಲ್ಲಿಯೇ ಏಮ್ಸ್ ಸ್ಥಾಪಿಸಲು ಸರ್ಕಾರಕ್ಕೆ ಒತ್ತಾಯಿಸಿದ ಎನ್ಎಸ್ ಬೋಸರಾಜು


ಜಯ ಧ್ವಜ ನ್ಯೂಸ್ ,ರಾಯಚೂರು,ಆ.21- ಜಿಲ್ಲೆಯ ನೀರಾವರಿ, ತುಂಗಭದ್ರಾ ಜಲಾಶಯ ಪ್ರದೇಶದ ಸಮಸ್ಯೆಗಳು ಹಾಗೂ ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್‌) ಸ್ಥಾಪನೆಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಅವರು ವಿಧಾನ ಪರಿಷತ್‌ನಲ್ಲಿ ಸರ್ಕಾರಕ್ಕೆ ಒತ್ತಾಯಿಸಿದರು.

ತುಂಗಭದ್ರಾ ಜಲಾಶಯದ ಕೆಳಭಾಗದಲ್ಲಿ ಪ್ರವಾಹ ನಿಯಂತ್ರಣ ಹಾಗೂ ಕಾಲುವೆಗಳ ಸುರಕ್ಷತೆಗಾಗಿ ಕೈಗೊಂಡಿರುವ ಕ್ರಮಗಳ ಕುರಿತು ಬೋಸರಾಜು ಅವರು ಮಾಹಿತಿ ಕೋರಿದರು. ಇದಕ್ಕೆ ಉತ್ತರಿಸಿದ ಸರ್ಕಾರ, ತುಂಗಭದ್ರಾ ಎಡದಂಡೆ ಕಾಲುವೆ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದೆ. ಕಾಲುವೆಗಳಲ್ಲಿನ ಹಳೆಯ ಹಾಗೂ ಹಾನಿಗೊಳಗಾದ ರಚನೆಗಳ ದುರಸ್ತಿ ಮತ್ತು ಬಲವರ್ಧನೆ ಸೇರಿದಂತೆ ಅಗತ್ಯ ಕಾಮಗಾರಿಗಳಿಗೆ ಸಂಬಂಧಿಸಿದಂತೆ ತಾಂತ್ರಿಕ ಪರಿಶೀಲನೆ ಹಾಗೂ ಅನುಮೋದನಾ ಪ್ರಕ್ರಿಯೆ ನಡೆಯುತ್ತಿದೆ ಎಂದು ಸರ್ಕಾರ ತಿಳಿಸಿದೆ.


ರಾಯಚೂರು ಜಿಲ್ಲೆಯ ನೀರಾವರಿ ಯೋಜನೆಗಳ ವೆಚ್ಚ ಹಾಗೂ ಯೋಜನೆಗಳ ಪ್ರಗತಿ ಕುರಿತೂ ಬೋಸರಾಜು ಅವರು ಪ್ರಶ್ನಿಸಿದರು. ವಿವಿಧ ಯೋಜನೆಗಳ ಕಾಮಗಾರಿಗಳ ಪ್ರಗತಿ ಹಾಗೂ ಅಂದಾಜು ವೆಚ್ಚದ ಕುರಿತು ಸರ್ಕಾರ ಸದನಕ್ಕೆ ಮಾಹಿತಿ ನೀಡಿದೆ.
ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆಗೆ ಒತ್ತು
ಇದೇ ವೇಳೆ ರಾಯಚೂರು ನಗರದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಸ್ಥಾಪನೆಗೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಕುರಿತು ಎನ್.ಎಸ್. ಬೋಸರಾಜು ಅವರು ಸರ್ಕಾರವನ್ನು ಪ್ರಶ್ನಿಸಿದರು. ಇದಕ್ಕೆ ಸರ್ಕಾರ, ಪ್ರಧಾನಮಂತ್ರಿ ಆರೋಗ್ಯ ಸುರಕ್ಷಾ ಯೋಜನೆ (PMSSY) ಅಡಿಯಲ್ಲಿ ಏಮ್ಸ್‌ ಸ್ಥಾಪನೆಗೆ ಸಂಬಂಧಿಸಿದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದೆ.


ಏಮ್ಸ್‌ ಸ್ಥಾಪನೆಗೆ ಅಗತ್ಯವಿರುವ ಭೂಮಿ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಇತರೆ ಮೂಲಸೌಕರ್ಯಗಳನ್ನು ಒದಗಿಸುವ ಕುರಿತು ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರದ ಉತ್ತರದಲ್ಲಿ ತಿಳಿಸಲಾಗಿದೆ.
ರಾಯಚೂರು ಜಿಲ್ಲೆಯಲ್ಲಿ ಏಮ್ಸ್‌ ಸ್ಥಾಪನೆಯಾದರೆ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಉನ್ನತ ಮಟ್ಟದ ವೈದ್ಯಕೀಯ ಸೇವೆಗಳು ಲಭ್ಯವಾಗಲಿದ್ದು, ಆರೋಗ್ಯ ಕ್ಷೇತ್ರದ ಮೂಲಸೌಕರ್ಯ ಮತ್ತಷ್ಟು ಬಲಪಡಿಸಲು ಸಹಕಾರಿಯಾಗಲಿದೆ ಎಂದರು.

Comments

Popular posts from this blog