ಆ.29 ರಂದು ನಗರದಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ ಹಾಕಿ ಟೂರ್ನಮೆಂಟ್: 16 ಜಿಲ್ಲೆಗಳ ತಂಡಗಳು ಭಾಗಿ-ರವೀಂದ್ರ ಜಲ್ದಾರ್. ಜಯ ಧ್ವಜ ನ್ಯೂಸ್, ರಾಯಚೂರು,ಆ.26- ನಗರದಲ್ಲಿ ಆ.29 ರಂದು ರಾಜ್ಯಮಟ್ಟದ ಹೊನಲು ಬೆಳಕಿನ ಹಾಕಿ ಟೂರ್ನಮೆಂಟ್ ಆಯೋಜಿಸಲಾಗಿದೆ ಎಂದು ಜಿಲ್ಲಾ ಹಾಕಿ ಅಸೋಸಿಯೇಷನ್ ಅಧ್ಯಕ್ಷರಾದ ರವೀಂದ್ರ ಜಲ್ದಾರ್ ಹೇಳಿದರು. ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಜಿಲ್ಲಾ ಹಾಕಿ ಅಸೋಸಿಯೇಷನ್ 25ನೇ ವಾರ್ಷಿಕೋತ್ಸವ ಅಂಗವಾಗಿ ಆ.29ರಂದು ನಗರದ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದ ಬಾಸ್ಕೇಟ್ ಬಾಲ್ ಕೋರ್ಟ್ ನಲ್ಲಿ ಬೆಳಿಗ್ಗೆ 10ಕ್ಕೆ ಟೂರ್ನಮೆಂಟ್ ಉದ್ಘಾಟನೆಯನ್ನು ಮಾಜಿ ಸಚಿವ ಹಾಗೂ ಕರ್ನಾಟಕ ಬಾಲ್ ಬ್ಯಾಡ್ಮಿಂಟನ್ ಅಧ್ಯಕ್ಷರಾದ ಕುಮಾರ್ ಬಂಗಾರಪ್ಪ ನೆರವೇರಿಸಲಿದ್ದು , ನಗರ ಶಾಸಕ ಡಾ.ಶಿವರಾಜ ಪಾಟೀಲ್ ಜ್ಯೋತಿ ಬೆಳಗಿಸಲಿದ್ದು,
ಮುಖ್ಯ ಅತಿಥಿಗಳಾಗಿ ಗ್ರಾಮೀಣ ಶಾಸಕ ಬಸನಗೌಡ ದದ್ದಲ್,ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ್ ,ಮಾಜಿ ಶಾಸಕ ಎ.ಪಾಪಾರೆಡ್ಡಿ, ಮಾಜಿ ಸಂಸದ ಬಿ.ವಿ.ನಾಯಕ, ಆರ್ ಡಿ ಎ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ಜಿಲ್ಲಾ ಹಾಕಿ ಅಸೋಸಿಯೇಷನ್ ಅಧ್ಯಕ್ಷರಾದ ರವೀಂದ್ರ ಜಲ್ದಾರ್, ಅಸೋಸಿಯೇಷನ್ ಕಾರ್ಯದರ್ಶಿ ಹನುಮಂತಪ್ಪ ಆಗಮಿಸಲಿದ್ದಾರೆ ಎಂದರು.
ರಾತ್ರಿ 9ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ , ಹಾಲಿ ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜು, ಸಂಸದ ಜಿ.ಕುಮಾರ ನಾಯಕ, ಮಾಜಿ ಸಚಿವ ಕೆ.ಶಿವನಗೌಡ ನಾಯಕ, ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್, ಕಾಂಗ್ರೆಸ್ ಮುಖಂಡ ರವಿ ಪಾಟೀಲ್, ಜೆಡಿಎಸ್ ಮುಖಂಡ ಬಸವರಾಜ ನಾಡಗೌಡ, ದೈಹಿಕ ಶಿಕ್ಷಣ ಇಲಾಖೆ ನಿವೃತ್ತ ಜಿಲ್ಲಾ ಅಧೀಕ್ಷಕ ಜಯ ಪ್ರಕಾಶ ರೆಡ್ಡಿ ಸೇರಿದಂತೆ ಅನೇಕರು ಆಗಮಿಸುತ್ತಿದ್ದಾರೆ ಎಂದರು. ರಾಜ್ಯದ ವಿವಿಧ ಜಿಲ್ಲೆಗಳಿಂದ 16 ತಂಡಗಳು ಟೂರ್ನಮೆಂಟ್ ನಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಂಡಿದ್ದು ಮತ್ತಷ್ಟು ತಂಡಗಳು ಬರುವ ನಿರೀಕ್ಷೆಯಿದೆ ಒಂದು ತಂಡಕ್ಕೆ ಒಂದೆ ಪಂದಾವಳಿಯಿರಲಿದ್ದು ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಟ್ರೋಫಿ ವಿತರಿಸಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಹನಮಂತಪ್ಪ, ರಾಜಶೇಖರ, ಮುತ್ತುರಾಜ್, ಮಂಜುನಾಥ್ ಸ್ವಾಮಿ ಇನ್ನಿತರರು ಇದ್ದರು.

Comments
Post a Comment