ನಾಳೆ ನಗರದಲ್ಲಿ ಶ್ರೀಸುಬುಧೇಂದ್ರತೀರ್ಥ ಶ್ರೀಪಾದಂಗಳವರಿಂದ ತಪ್ತ ಮುದ್ರಾಧಾರಣೆ
ಜಯ ಧ್ವಜ ನ್ಯೂಸ್, ರಾಯಚೂರು, ಆ.8- ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು ಆ.9 ರವಿವಾರ ಬೆಳಿಗ್ಗೆ 10 ಘಂಟೆಗೆ ರಾಯಚೂರು ನಗರದ ಜವಾಹರ್ ನಗರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಚಾತುರ್ಮಾಸ್ಯದ ಅಂಗವಾಗಿ ತಪ್ತ ಮುದ್ರಾ ಧಾರಣೆ ಮಾಡಲಿದ್ದಾರೆ.
ಶ್ರೀಮಠದ ಶಿಷ್ಯರು ಹಾಗೂ ಭಕ್ತಾದಿಗಳು ಆಗಮಿಸಿ ಗುರುಗಳ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.


Comments
Post a Comment