ರಾಯಚೂರಲ್ಲಿ  ರಾಜ್ಯಮಟ್ಟದ  ಪತ್ರಕರ್ತರ  ಸಮ್ಮೇಳನ ಯಶಸ್ವಿಗೆ ಸಂಪೂರ್ಣ ಸಹಕಾರ:

ಬೆಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅಜಯ್ ಸಿಂಗ್ ಭರವಸೆ 

ಜಯ ಧ್ವಜ ನ್ಯೂಸ್ ,ರಾಯಚೂರು,ಆ.21- ಮಂಬರುವ ದಿನಗಳಲ್ಲಿ ರಾಯಚೂರಿನಲ್ಲಿ ನಡೆಯಲಿರುವ 41ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಯಶಸ್ವಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಜಯ್ ಧರ್ಮಸಿಂಗ್ ತಿಳಿಸಿದರು.        ಬೆಂಗಳೂರಿನಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ನೇತೃತ್ವದಲ್ಲಿ ಭೇಟಿಯಾದ ರಾಯಚೂರು ಜಿಲ್ಲೆಯ ಪತಕರ್ತರ ಜೊತೆ ಸಮ್ಮೇಳನ ಪೂರ್ವಭಾವಿಯಾಗಿ ಮಾತುಕತೆ ನಡೆಸಿದರು. ರಾಯಚೂರಿನಲ್ಲಿ ಸಮ್ಮೇಳನ ನಡೆಯುತ್ತಿರುವುದು ಬಹಳ ಖುಷಿಯ ವಿಚಾರ. ಸಮ್ಮೇಳನದ ಎಲ್ಲಾ ಸಿದ್ಧತೆಗಳನ್ನು ಶೀಘ್ರದಲ್ಲಿ ಆರಂಭಿಸುವ ಕುರಿತು ಸಭೆ ನಡೆಸಲಾಗುವುದು. ಸಮ್ಮೇಳನದ ಎಲ್ಲಾ ಕೆಲಸ ಕಾರ್ಯಗಳು ಅಚ್ಚುಕಟ್ಟಾಗಿ ನಿರ್ವಹಿಸೋಣ. ಎಲ್ಲರ ಸಹಕಾರದೊಂದಿಗೆ ಒಗ್ಗೂಡಿ  ಕೆಲಸ ಮಾಡಬೇಕಿದೆ ಎಂದು ತಿಳಿಸಿದರು. 


 ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮಾತನಾಡಿ, ಕಳೆದ ಬಾರಿ ಬೀದರ್ ನಲ್ಲಿ ನಡೆದ 40ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ಯಶಸ್ವಿಯಾಗಿದ್ದು, ರಾಯಚೂರಿನಲ್ಲಿ ಕೂಡ ಅದ್ದೂರಿಯಾಗಿ ಸಮ್ಮೇಳನ ನಡೆಸಬೇಕಿದೆ. ಸಮ್ಮೇಳನಕ್ಕೆ ಈಗಿನಿಂದಲೇ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು. ಜಿಲ್ಲಾಧ್ಯಕ್ಷ ಆರ್ ಗುರುನಾಥ್, ರಾಜ್ಯ ಸಮಿತಿ ಸದಸ್ಯ ಬಸವರಾಜ ನಾಗಡದಿನ್ನಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಯ್ಯ ಸ್ವಾಮಿ ಕುಕನೂರು, ಕಾರ್ಯಕಾರಿ ಸಮಿತಿ ಸದಸ್ಯರಾದ ವಿಶ್ವನಾಥ್ ಹೂಗಾರ್, ನೀಲಕಂಠ ಸ್ವಾಮಿ, ಲಕ್ಷ್ಮಣ್ ಕಪಗಲ್,ಪ್ರಸನ್ನ ಜೈನ್,  ಪತ್ರಕರ್ತರಾದ ರಾಮಕೃಷ್ಣ ದಾಸರಿ, ಚನ್ನಬಸವ ಬಾಗಲವಾಡ, ಖಾನ್ ಸಾಬ್ ಮೊಮಿನ್, ಲಿಂಗಸುಗೂರು ತಾಲೂಕ ಅಧ್ಯಕ್ಷ ಶಿವರಾಜ್ ಕೆಂಭಾವಿ ಸೇರಿದಂತೆ ಇತರರು ಇದ್ದರು.

Comments

Popular posts from this blog